ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೂವರು ದುರ್ಮರಣಕ್ಕಿಡಾಗಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ನಾಗತಿಹಳ್ಳಿ ಬಳಿ ನಡೆದಿರುವ ಕಾರು ಅಪಘಾತದಲ್ಲಿ ಚಿಕ್ಕಮಗಳೂರು ಮೂಲದ ಚನ್ನೆಗೌಡ (60), ಸರೋಜಮ್ಮ (55), ಜಯಮ್ಮ (70) ಮೃತ ದುರ್ದೈವಿಗಳಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ. ಬೆಂಗಳೂರಿನಿಂದ ಚಿಕ್ಕಮಗಳೂರುಗೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದ್ದು, ಕಾರು ತಿರುವಿನಲ್ಲಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಮೃತದೇಹ ರವಾನೆ. ಮಾಡಲಾಗಿದ್ದು, ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


