ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಕಾರ್ಯಕರ್ತರು

Letest Post ಬೆಳಗಾವಿ

ಬೆಳಗಾವಿ: ಬೆಂಡಿಗೇರಿ ಗ್ರಾಮದ ಹಲವಾರು ಪ್ರಮುಖ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಗೃಹ ಕಚೇರಿಗೆ ಆಗಮಿಸಿದ ಕಾರ್ಯಕರ್ತರು, ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳು ಹಾಗೂ ಅಭಿವೃದ್ಧಿ ಪರ ಕೆಲಸಗಳನ್ನು ನೋಡಿ ಕಾಂಗ್ರೆಸ್ ಸೇರಲು ಬಯಸಿದ್ದಾಗಿ ತಿಳಿಸಿದರು.

ಸಚಿವರು ಕಾಂಗ್ರೆಸ್ ಶಾಲು ಹಾಕಿ ಎಲ್ಲರನ್ನೂ ಪಕ್ಷಕ್ಕೆ ಸ್ವಾಗತಿಸಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *