ಮುತ್ನಾಳ ಶಿವಾನಂದ ಶಿವಾಚಾರ್ಯ ಶ್ರೀ ನಿಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

ಬೆಳಗಾವಿ: ಬೆಳಗಾವಿ ತಾಲೂಕಿನ ಮುತ್ನಾಳ ಗ್ರಾಮದಲ್ಲಿರುವ ಕೇದಾರ ಪೀಠದ ಶಾಖಾ ಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಇಂದು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ. ಕೆಲ ದಿನಗಳಿಂದ ಸ್ವಾಮಿಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಸ್ವಾಮೀಜಿ ನಿಧನಕ್ಕೆ ಹಲವು ಮಠಾದೀಶರು, ಗಣ್ಯರು ಸಂತಾಪ ಸೂಚಿಸಿದ್ದಾರೆ. ಸ್ವಾಮಿಜಿ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಮುತ್ನಾಳ ಗ್ರಾಮದ ಕೇದಾರ್ ಶಾಖಾ ಪೀಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಲಿಂಗೈಕ್ಯರಾದ ಸುದ್ದಿ ಮನಸ್ಸಿಗೆ ಅತೀವ ನೋವು ತಂದಿದೆ. ಪೂಜ್ಯರ ಅಗಲಿಕೆ ಕೇವಲ ಮುತ್ನಾಳ ಗ್ರಾಮಕ್ಕೆ […]

ಮತ್ತಷ್ಟು ಓದಿ..

ಡಿ.1 ಉದ್ಯೋಗಾಂಕ್ಷಿಗಳ ಧಾರವಾಡ ಚಲೋ ಹೋರಾಟ: ಅನುಮತಿ ನಿರಾಕರಿಸಿದ ಪೊಲೀಸ್ ಇಲಾಖೆ

ಧಾರವಾಡ: ರಾಜ್ಯ ಸರ್ಕಾರ ಯಾವುದೇ ಸರ್ಕಾರಿ ಉದ್ಯೋಗಗಳ ನೇಮಕಾತಿ ಮಾಡಿಕೊಳ್ಳುತ್ತಿಲ್ಲ ಮತ್ತು ವಯೋಮಿತಿ ಸಡಿಲಿಕೆ ಕೂಡ ಮಾಡುತ್ತಿಲ್ಲ ಎಂದು ಸರ್ಕಾರದ ವಿರುದ್ದ ರೊಚ್ಚಿಗೆದ್ದಿರುವ ವಿದ್ಯಾರ್ಥಿ ಸಂಘಟನೆ ಮತ್ತು ಸಾವಿರಾರು ಉದ್ಯೋಗಾಕಾಂಕ್ಷಿಗಳು ನಾಳೆ ಡಿಸೆಂಬರ್ 1ನೇ ತಾರೀಖಿನಂದು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ಆಯೋಜನೆ ಮಾಡಲು ಮುಂದಾಗಿದ್ದು, ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ. ಡಿಸೆಂಬರ್ 1 ಕ್ಕೆ ಧಾರವಾಡ ಚಲೋ‌ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ಆಯೋಜನೆ ಮಾಡಿ ಈ ಕುರಿತು ಸಾಮಾಜಿಕ ಜಾಲ ತಾಣದಲ್ಲಿ ಕರೆ ನೀಡಲಾಗಿದೆ. ವಯೋಮಿತಿ ಸಡಿಲಿಕೆ, […]

ಮತ್ತಷ್ಟು ಓದಿ..

ಮಂಡ್ಯ ಭೂವರಾಹನಾಥ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ ದಂಪತಿ: ತಿಹಾರ ಜೈಲು ನೆನೆದ ಡಿಸಿಎಂ

ಮಂಡ್ಯ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದು ಮಂಡ್ಯ ಜಿಲ್ಲೆಯ ಸುಪ್ರಸಿದ್ಧ ಭೂವರಾಹನಾಥ ದೇವಾಲಯಕ್ಕೆ ದಂಪತಿ ಸಮೇತ ಭೇಟಿ ನೀಡಿ ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದ ಡಿಕೆಶಿ ಭೂವರಾಹನಾಥ ದೇವಾಲಯದ ಹಿನ್ನೆಲೆ ಮತ್ತು ತಮ್ಮ ವೈಯಕ್ತಿಕ ಅನುಭವಗಳನ್ನು ಮೆಲುಕು ಹಾಕಿದ್ರು. ಭೂವರಾಹನಾಥ ದೇವಾಲಯಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ದಂಪತಿ ವಿವಿಧ ಪೂಜಾ ಕಾರ್ಯಗಳಲ್ಲಿ ಭಾಗಿಯಾದರು. ಪೂಜೆಯ ಭಾಗವಾಗಿ ಹೋಮ ಕುಂಡಕ್ಕೆ ಪೂರ್ಣಾಹುತಿ ಸಲ್ಲಿಸಿದ […]

ಮತ್ತಷ್ಟು ಓದಿ..

ವಿಶೇಷಚೇತನರಿಗೆ ಪ್ರತ್ಯೇಕ ನಿಗಮ/ಮಂಡಳಿ ರಚನೆಗೆ ಮುಖ್ಯಮಂತ್ರಿಗೆ ಸಚಿವ ಸಂತೋಷ್ ಲಾಡ್ ಪತ್ರ

ಬೆಂಗಳೂರು: ಸರ್ಕಾರದ ಸವಲತ್ತುಗಳನ್ನು ತ್ವರಿತವಾಗಿ ಮತ್ತು ನೇರವಾಗಿ ತಲುಪಿಸಲು ಸಾಧ್ಯವಾಗುವಂತೆ ವಿಶೇಷ ಚೇತನರಿಗಾಗಿಯೇ ಒಂದು ಪ್ರತ್ಯೇಕ ನಿಗಮ ಅಥವಾ ಮಂಡಳಿಯ ಸ್ಥಾಪನೆಯ ಅಗತ್ಯವಿದೆ ಎಂದು ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಪ್ರತಿಪಾದಿಸಿದ್ದಾರೆ. ಈ ವಿಷಯದ ಸಂಬಂಧ ಶುಕ್ರವಾರ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿರುವ ಸಚಿವರು, ಸದ್ಯ ವಿಶೇಷಚೇತನರ ಇಲಾಖೆಯು ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಹಾಗೂ ಹಿರಿಯ ನಾಗರಿಕರನ್ನು ಒಳಗೊಂಡ ಇಲಾಖೆಯಲ್ಲಿ ಇರುವುದರಿಂದ, ಈ ಇಲಾಖೆಯು ಬಹಳ […]

ಮತ್ತಷ್ಟು ಓದಿ..

ಸಿಎಂ ಖುರ್ಚಿ ಕದನ ಉಭಯ ನಾಯಕರ ಜಂಟಿ ಸುದ್ದಿಗೋಷ್ಠಿ: ರಾಜಕೀಯ ಮೇಲಾಟಕ್ಕೆ ತಾತ್ಕಾಲಿಕ ವಿರಾಮ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ ತೆರಳಿ ಬ್ರೇಕ್ ಫಾಸ್ಟ್ ಮೀಂಟಿಂಗ್ ನಲ್ಲಿ ಭಾಗವಹಿಸಿದರು. ಇದೇ ವೇಳೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿಸಿಎಂ ಅವರನ್ನು ಸಿಎಂ ಸಿದ್ದರಾಮಯ್ಯ ಬರಮಾಡಿಕೊಂಡರು. ಸಿಎಂ ನಿವಾಸದಲ್ಲೇ ಉಭಯ ನಾಯಕರು ಉಪಹಾರ ಮಾಡುತ್ತ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ಬ್ರೇಕ್ ಫಾಸ್ಟ್ ಮುಗಿಸಿ ಉಭಯ ನಾಯಕರು ನಗುನಗುತ್ತಲೇ ಹೊರಬಂದು ಜಂಟಿ ಸುದ್ದಿಗೋಷ್ಠಿ ನಡೆಸಿ ಪತ್ರಕರ್ತರೊಂದಿಗೆ ಮಾತನಾಡಿದರು. ನಾನು, ಡಿ.ಕೆ.ಶಿವಕುಮಾರ್ ಹಾಗೂ ಪೊನ್ನಣ್ಣ ಬ್ರೇಕ್ […]

ಮತ್ತಷ್ಟು ಓದಿ..

ಸುಕ್ಷೇತ್ರ ಕೊಣ್ಣೂರ-ಮರಡಿಮಠದ ಶ್ರೀ ಕಾಡಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ

ಬೆಳಗಾವಿ: ಪ್ರತಿ ವರ್ಷದಂತೆ ಈ ವರ್ಷ ಕೂಡ ಲಿಂಗೈಕ್ಯ ಶ್ರೀಮದ್ ಜಗದ್ಗುರು ಶ್ರೀ ಘನಲಿಂಗ ಚಕ್ರವರ್ತಿ ಡಾ. ಶ್ರೀ ಅದೃಶ್ಯ ಗುರುಸಿದ್ದೇಶ್ವರ ಮಹಾಸ್ವಾಮಿಗಳವರ ಆಶೀರ್ವಾದದಿಂದ ಹಾಗೂ ಶ್ರೀ ಮ, ಘ, ಚ, ಡಾ. ಪವಾಡೇಶ್ವರ ಮಹಾಸ್ವಾಮಿಗಳವರ ದಿವ್ಯ ಸನ್ನಿದಿಯಲ್ಲಿ ವಿಜೃಂಭಣೆಯಿಂದ ಜರಗುವ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸುಕ್ಷೇತ್ರ ಕೊಣ್ಣೂರ ಮರಡಿಮಠದ ಆರಾಧ್ಯ ದೈವ ಶ್ರೀ ಕಾಡಸಿದ್ದೇಶ್ವರ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಕಾರ್ತಿಕ ಮಹೋತ್ಸವಕ್ಕೆ ಅದ್ದೂರಿ ಚಾಲನೆ ಸಿಕ್ಕದೆ. ದಿನಾಂಕ 28-11-2025 ರಿಂದ 02-12-2025 ಒಟ್ಟು […]

ಮತ್ತಷ್ಟು ಓದಿ..

ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರ ಮಹಾತ್ವಾಕಾಂಕ್ಷೆಯ 3 ಯೋಜನೆಗಳು ಲೋಕಾರ್ಪಣೆ: ಸಿಎಂ, ಡಿಸಿಎಂ ರಿಂದ ಚಾಲನೆ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಕನಸಿನ ಯೋಜನೆಗಳಾದ ಅಕ್ಕ ಪಡೆ, ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಅದ್ದೂರಿ ಸಮಾರಂಭದಲ್ಲಿ ಚಾಲನೆ ನೀಡಿದರು. ಅರಮನೆ ಮೈದಾನದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ […]

ಮತ್ತಷ್ಟು ಓದಿ..

“ಶಾಲೆಯ ಅಂಗಳದಲ್ಲಿ ತಾರಾಲಯ” ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ: “ಗ್ರಾಮೀಣ ಮಕ್ಕಳಲ್ಲಿ ವಿಜ್ಞಾನ ಕೌತುಕ ಬಿತ್ತುವುದು ನಮ್ಮ ಗುರಿ”

ಬೆಂಗಳೂರು, ನವೆಂಬರ್ 27: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ವಿಜ್ಞಾನ ಶಿಕ್ಷಣವನ್ನು ತಲುಪಿಸುವ ಮಹತ್ವಾಕಾಂಕ್ಷಿ “ಶಾಲೆಯ ಅಂಗಳದಲ್ಲಿ ತಾರಾಲಯ” ಡಿಜಿಟಲ್ ಮೊಬೈಲ್ ಪ್ಲಾನೆಟೇರಿಯಂ ಯೋಜನೆಗೆ ಇಂದು ವಿಧಾನಸೌಧದ ಆವರಣದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಹಸಿರು ನಿಶಾನೆ ತೋರಿಸುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿಗಳು, “ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಖಗೋಳ ವಿಜ್ಞಾನದ ಕೌತುಕವನ್ನು ಬಿತ್ತಿ, ವಿಜ್ಞಾನ ಕಲಿಕೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ. ಈ ಯೋಜನೆ […]

ಮತ್ತಷ್ಟು ಓದಿ..

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಕ್ಕಿನಕೇರಿ ಗ್ರಾಮದಲ್ಲಿ ಸುಮಾರು 2 ಕೋಟಿ 60 ಲಕ್ಷ ರೂ. ವೆಚ್ಚದಲ್ಲಿ ಕೈಗೊಳ್ಳಲಿರುವ ರಸ್ತೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷ ಯುವರಾಜ ಕದಂ, ಗ್ರಾಮದ ಹಿರಿಯ ನಾಗರಿಕರು, ಸ್ಥಳೀಯ ಜನಪ್ರತಿನಿಧಿಗಳು, ನಿವಾಸಿಗಳು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

ಮತ್ತಷ್ಟು ಓದಿ..

ರಾಜ್ಯದಲ್ಲಿ ಮಾನ್ಸೂನ್ ಅವಧಿಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆ ಹಾನಿ: ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಸರ್ಕಾರ

ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ ರೂ.1033.60 ಕೋಟಿ ಇನ್ಪುಟ್ ಸಬ್ಸಿಡಿ ವಿತರಿಸಿದ ಸಿಎಂ ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಚಾಲನೆ ಬೆಂಗಳೂರು: ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು, ಇಂದು ಚಾಲನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಬೆಳೆ ಹಾನಿ ಸಂಭವಿಸಿದ 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ. 1033.60 ಕೋಟಿ […]

ಮತ್ತಷ್ಟು ಓದಿ..