ಹಿರಿಯ ನಾಗರಿಕರಿಗಾಗಿಯೇ ಜನ್ಮದಿನ ಸಮರ್ಪಣೆ: ಅಪರೂಪದ ಕಾರ್ಯಕ್ರಮ

ಮಾನವೀಯ ಮೌಲ್ಯಗಳಿಗೆ ಹೊಸ ಅರ್ಥ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಫೆಬ್ರವರಿ 14, ಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಜನ್ಮ ದಿನಾಚರಣೆ. ಹಿರಿಯ ನಾಗರಿಕರೊಂದಿಗೆ, ಅವರನ್ನು ಗೌರವಿಸುವ ಮೂಲಕ ಜನ್ಮ ದಿನಾಚರಣೆ ಮಾಡಲು ಲಕ್ಷ್ಮೀ ಹೆಬ್ಬಾಳಕರ್ ಅವರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಜನ್ಮದಿನವೆಂದರೆ ಕೇಕ್, ಹೂಗುಚ್ಛಗಳು, ಶುಭಾಶಯಗಳ ನಡುವೆ ನಡೆಯುವ ವೈಯಕ್ತಿಕ ಆಚರಣೆ. ಆದರೆ ಇದಕ್ಕೆ ವಿಭಿನ್ನ ಅರ್ಥ ನೀಡುವ ಮೂಲಕ ಮಾನವೀಯ ಮೌಲ್ಯಗಳಿಗೆ ಹೊಸ ಅರ್ಥ ಕೊಟ್ಟಿದ್ದಾರೆ ಸಚಿವೆ […]

ಮತ್ತಷ್ಟು ಓದಿ..

ಬೆಳಗಾವಿ ಎಲೆಕ್ಟ್ರಾನಿಕ್ ಮೀಡಿಯಾ ಅಸೋಷಿಯೇಶನ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಗಾವಿ: ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಾಲಿಸ್ಟ್ ಅಸೋಷಿಯೇಶನ್‌ಗೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮುಂದಿನ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಈ ಸಂಬಂಧ ಮಂಗಳವಾರ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಸಂಘದ ಸದಸ್ಯರ ಸಭೆ ನಡೆಯಿತು. ಸಭೆಯಲ್ಲಿ ಮುಂದಿನ ಅವಧಿಗೆ ಸಂಘದ ನೂತನ ಅಧ್ಯಕ್ಷರಾಗಿ ನ್ಯೂಸ್ 18 ಕನ್ನಡದ ಹಿರಿಯ ವರದಿಗಾರ ಚಂದ್ರಕಾಂತ ಸುಗಂಧಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಟಿವಿ-5 ಹಿರಿಯ ವರದಿಗಾರ ಶ್ರೀಧರ್ ಕೋಟಾರಗಸ್ತಿ, ಖಜಾಂಚಿಯಾಗಿ ಟಿವಿ-9 […]

ಮತ್ತಷ್ಟು ಓದಿ..

ನಾಳೆಯಿಂದ ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣ ಸಂದಾಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಬೆಳಗಾವಿ: ಸೋಮವಾರದಿಂದ ಶನಿವಾರದೊಳಗೆ (ಡಿಸೆಂಬರ್‌ 22 ರಿಂದ 27) ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.  ಬೆಳಗಾವಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆಯವರು ಈಗಾಗಲೇ ಅನುಮತಿ ನೀಡಿದ್ದು, ಸೋಮವಾರದಿಂದ ಹಣ ಸಂದಾಯವಾಗಲಿದೆ ಎಂದರು. ಸತ್ತವರ ಅಕೌಂಟ್‌ಗೂ ಗೃಹಲಕ್ಷ್ಮೀ ಯೋಜನೆಯ ಹಣ ಸಂದಾಯ ಆಗುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ […]

ಮತ್ತಷ್ಟು ಓದಿ..

ಮುಖ್ಯಮಂತ್ರಿಗಳಿಂದ ಇ-ಖಾತಾ ಲೋಕಾರ್ಪಣೆ, ಪೌರಕಾರ್ಮಿಕರಿಗೆ ನೇಮಕಾತಿ ಆದೇಶ, ಮನೆಗಳ ಹಕ್ಕುಪತ್ರಗಳ ವಿತರಣೆ

ಬೆಳಗಾವಿ ಸುವರ್ಣಸೌಧ ಡಿ.18. (ಕರ್ನಾಟಕ ವಾರ್ತೆ): ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಡಿ.18 ರಂದು ಇ-ಖಾತಾ ಸೌಕರ್ಯಕ್ಕೆ ವಿದ್ಯುಕ್ತ ಚಾಲನೆ ನೀಡಿದರು. ಬೆಳಗಾವಿಯ ಸುವರ್ಣವಿಧಾನಸೌಧದ ಸಭಾಂಗಣದಲ್ಲಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರಗಳ ಮತ್ತು ಮನೆಯ ಹಕ್ಕುಪತ್ರಗಳ ವಿತರಣೆಗೆ ಸಹ ಅವರು ಚಾಲನೆ ನೀಡಿದರು. ಸಮಾರಂಭದಲ್ಲಿ ಇ-ಖಾತಾ ಕೈಪಿಡಿ ಬಿಡುಗಡೆ ಮಾಡಲಾಯಿತು. ಇದೇ ವೇಳೆ ಬೆಳಗಾವಿಯ 127 ಪೌರ ಕಾರ್ಮಿಕರಿಗೆ ಖಾಯಂ […]

ಮತ್ತಷ್ಟು ಓದಿ..

ಮಂಗಳವಾರ ಸುವರ್ಣ ಸೌಧದಲ್ಲಿ  ಬಾಲವಿಕಾಸ ಅಕಾಡೆಮಿ ವಾರ್ಷಿಕ ಪ್ರಶಸ್ತಿಗಳ ಪ್ರಧಾನ: ಅಕಾಡೆಮಿಗೆ ಹೊಸ ಸ್ವರೂಪ ನೀಡಿದ ಸಂಗಮೇಶ ಬಬಲೇಶ್ವರ

2 ಕೋಟಿ ಮಕ್ಕಳ ಏಳಿಗೆಗಾಗಿ ಶ್ರಮಿಸುತ್ತಿರುವ ಬಾಲವಿಕಾಸ ಅಕಾಡೆಮಿ -ಅಧ್ಯಕ್ಷ ಸಂಗಮೇಶ ಬಬಲೇಶ್ವರ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾರ್ಗದರ್ಶನದಲ್ಲಿ ಅಕಾಡೆಮಿಗೆ ಹೊಸಸ್ವರೂಪ ಬೆಳಗಾವಿ: ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳ ಪ್ರಧಾನ ಸಮಾರಂಭ ಹಮ್ಮಿಕೊಂಡಿದ್ದು, 2022-23 ಹಾಗೂ 2023-24 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪುರಸ್ಕೃತರಿಗೆ ವಿತರಿಸಲಾಗುತ್ತಿದೆ.ಕರ್ನಾಟಕ ಬಾಲವಿಕಾಸ ಅಕಾಡೆಮಿಯು ರಾಜ್ಯದ ಸುಮಾರು 2 ಕೋಟಿ ಮಕ್ಕಳ ಶ್ರಯೋಭಿವೃದ್ಧಿಗಾಗಿ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶ್ರಮಿಸುತ್ತಿದೆ. ಮಹಿಳಾ ಮತ್ತು […]

ಮತ್ತಷ್ಟು ಓದಿ..

ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಸ್ಥಳದಲ್ಲೇ ಓರ್ವ ಸಾವು: ಇಬ್ಬರು ಯುವಕರಿಗೆ ಗಂಭೀರ ಗಾಯ

ಗದಗ: ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ನಡೆದ ಈ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ದುರ್ಮರಣಕ್ಕಿಡಾಗಿದ್ದರೆ, ಇನ್ನುಳಿದ ಇಬ್ಬರು ಯುವಕರಿಗೆ ಗಂಭೀರ ಗಾಯಗಳಾಗಿವೆ. ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 67 ರಲ್ಲಿ ಈ ಘಟನೆ ನಡೆದಿದ್ದು, ಕಾರು ಚಾಲನೆ ಮಾಡ್ತಿದ್ದ ಜೀತೇಂದ್ರ (23) ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ. ಉಳಿದಂತೆ ಪವನ್ (32), ವೆಂಕಟೇಶ (33) ಹೆಸರಿನ ಇಬ್ಬರು ಯುವಕರು ಗಂಭೀರವಾಗಿ […]

ಮತ್ತಷ್ಟು ಓದಿ..

ಕನ್ನಡ ನಾಮಫಲಕ ಅಳವಡಿಕೆಗೆ ನಿಗಾವಹಿಸಲು ರಾಜ್ಯದ ಎಲ್ಲಾ ಡಿಸಿಗಳಿಗೆ ಸೂಚನೆ: ಸಚಿವ ಶಿವರಾಜ ತಂಗಡಗಿ

ಬೆಳಗಾವಿ ಸುವರ್ಣವಿಧಾನಸೌಧ ಡಿ.12 (ಕ.ವಾ.): ರಾಜ್ಯದಲ್ಲಿ ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ ಕುರಿತು ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ತಿಳಿಸಿದರು. ವಿಧಾನ ಪರಿಷತ್ತಿನಲ್ಲಿ ಡಿ.12ರಂದು ಸದಸ್ಯರಾದ ಡಾ.ಉಮಾಶ್ರೀ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಮೂಲ ಕಾಯಿದೆ 17ನೇ ಪ್ರಕರಣದ ಆರನೇ ಉಪಪ್ರಕರಣದಂತೆ ಸರ್ಕಾರ ಅಥವಾ ಸ್ಥಳೀಯ […]

ಮತ್ತಷ್ಟು ಓದಿ..

2023 ರಿಂದಲೇ ನೇಕಾರರಿಗೆ ಉಚಿತ ವಿದ್ಯುತ್‌ ಬೇಡಿಕೆ ಪರಿಶೀಲನೆ ಭರವಸೆ: ಸಚಿವ ಶಿವಾನಂದ ಪಾಟೀಲ್

ಬೆಳಗಾವಿ: ವಿದ್ಯುತ್‌ ಮಗ್ಗಗಳಿಗೆ ಹತ್ತು ಅಶ್ವಶಕ್ತಿವರೆಗೆ ನವೆಂಬರ್‌ 2023ರಿಂದ ಜಾರಿ ಮಾಡಿರುವ ಉಚಿತ ವಿದ್ಯುತ್‌ ಪೂರೈಕೆ ಯೋಜನೆಯನ್ನು ಏಪ್ರಿಲ್‌ನಿಂದ ಅನ್ವಯಗೊಳಿಸುವ ನೇಕಾರರ ಬೇಡಿಕೆಯನ್ನು ಪರಿಗಣಿಸಲಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು. ವಿಧಾನಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ವೇಳೆಯಲ್ಲಿ ಶಶಿಕಲಾ ಜೊಲ್ಲೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಹತ್ತು ಅಶ್ವಶಕ್ತಿವರೆಗಿನ ವಿದ್ಯುತ್‌ ಮಗ್ಗಗಳಿಗೆ ಉಚಿತ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ಈ ಆದೇಶ ನವಂಬರ್‌ನಿಂದ ಜಾರಿಗೆ ಬಂದಿದ್ದು, ಅಂದಿನಿಂದ […]

ಮತ್ತಷ್ಟು ಓದಿ..

ರಾಜ್ಯ 7ನೇ ವೇತನ ಆಯೋಗದ ಸಂಪುಟ 1ರ ವರದಿಯ ಶಿಫಾರಸ್ಸು ಪರಿಶೀಲನೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ ಸುವರ್ಣವಿಧಾನಸೌಧ ಡಿ.11 (ಕ.ವಾ.): ವಿಶೇಷ ಚೇತನ ರಾಜ್ಯ ಸರ್ಕಾರಿ ನೌಕರರಿಗೆ ವಾಹನ ಖರೀದಿಗೆ ಪ್ರಸ್ತುತ ನೀಡಲಾಗುತ್ತಿರುವ ಸಹಾಯಧನದ ಪರಿಷ್ಕರಣೆಯನ್ನೂ ಒಳಗೊಂಡಂತೆ ಸರ್ಕಾರಿ ನೌಕರರಿಗೆ ಲಭ್ಯವಿರುವ ವಿವಿಧ ಭತ್ಯೆ ಮತ್ತು ಸೌಲಭ್ಯಗಳ ಪರಿಷ್ಕರಣೆ ಕುರಿತಂತೆ ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ಸಂಪುಟ-1ರ ವರದಿಯಲ್ಲಿನ ಶಿಫಾರಸ್ಸುಗಳು ಪ್ರಸ್ತುತ ಸರ್ಕಾರದ ಪರಿಶೀಲನೆಯಲ್ಲಿರುತ್ತದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹೇಳಿದರು. ಪರಿಷತ್ತಿನಲ್ಲಿ ಡಿ.11ರಂದು ಸದಸ್ಯರಾದ ಬಲ್ಕೀಸ್ ಬಾನು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, 7ನೇ ರಾಜ್ಯ ವೇತನ […]

ಮತ್ತಷ್ಟು ಓದಿ..

ಎಸ್.ನಿಜಲಿಂಗಪ್ಪ ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ, ಡಿಸೆಂಬರ್ 10: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿ. ಎಸ್. ನಿಜಲಿಂಗಪ್ಪರವರ ಜನ್ಮ ದಿನದ ಅಂಗವಾಗಿ ಸುವರ್ಣ ವಿಧಾನಸೌಧದಲ್ಲಿರುವ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿ ಮಾತನಾಡಿದರು. ನಿಜಲಿಂಗಪ್ಪನವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹಾಗೂ ಅವಿಭಜಿತ ಕಾಂಗ್ರೆಸ್ ಪಕ್ಷದ ಎಐಸಿಸಿ ಅಧ್ಯಕ್ಷರಾಗಿದ್ದರು. ಪ್ರಧಾನಿ ಇಂದಿರಾ ಗಾಂಧಿ ಯವರೊಂದಿಗೆ ರಾಜಕೀಯ ಭಿನ್ನಾಭಿಪ್ರಾಯ ಬೆಳೆದು ಬೇರೆ […]

ಮತ್ತಷ್ಟು ಓದಿ..