ಧಾರವಾಡಕ್ಕೆ ಬಂದ ಸಾಲಿಮಠ ಪಾರ್ಥೀವ ಶರೀರ: ಅಂತಿಮ ನಮನ ಸಲ್ಲಿಸಿದ ಪೊಲೀಸ್ ಸಿಬ್ಬಂದಿ

ಧಾರವಾಡ: ಜೀವ ನೀರ ಮೇಲಿನ ಗುಳ್ಳೆ ಇದ್ದಂತೆ. ಯಾವಾಗ ಬೇಕಾದರೂ ಏನಾದರೂ ಆಗಬಹುದು ಎಂಬುದಕ್ಕೆ ಮತ್ತೊಂದು  ನಿದರ್ಶನವೇ ಪಂಚಾಕ್ಷಿರಿ ಸಾಲಿಮಠ ಅವರ ದುರಂತ ಅಂತ್ಯ. ಮೊನ್ನೆಯಷ್ಟೇ ಧಾರವಾಡದಲ್ಲೇ ಕರ್ತವ್ಯ ನಿರ್ವಹಿಸಿ ಸಾಕಷ್ಟು ಹೆಸರು ಮಾಡಿದ್ದ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರ ದುರಂತ ಅಂತ್ಯವಾದರೆ, ಇದೀಗ ಧಾರವಾಡದಲ್ಲೇ ಕರ್ತವ್ಯ ನಿರ್ವಹಿಸಿ ಹೋಗಿದ್ದ ಇನ್‌ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರ ಮತ್ತೊಂದು ದುರಂತ ಅಂತ್ಯವಾಗಿದೆ. ನಿನ್ನೆ ಅಣ್ಣಿಗೇರಿ ಪಟ್ಟಣದ‌ ಹೊರವಲಯದಲ್ಲಿ ದುರಂತ ಅಂತ್ಯ ಕಂಡ ಹಾವೇರಿ ಲೋಕಾಯುಕ್ತ ಇನ್‌ಸ್ಪೆಕ್ಟರ್ ಆಗಿದ್ದ […]

ಮತ್ತಷ್ಟು ಓದಿ..

ಇಂಡಿಗೋ ವಿಮಾನ ಹಾರಾಟದಲ್ಲಿ ಏರುಪೇರು: ಐದನೇ ದಿನವೂ ನಿಲ್ಲದ ಪ್ರಯಾಣಿಕರ ಗೋಳಾಟ

ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ 5ನೇ ದಿನವೂ ವ್ಯತ್ಯಯ ಕಂಡುಬಂದಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ ಹೇಳತೀರದಾಗಿದೆ. ನೂರಾರು ಸಂಖ್ಯೆಯಲ್ಲಿ ಪ್ರಯಾಣಿರರು ವಿಮಾನ ನಿಲ್ದಾಣದಲ್ಲೇ ಸಮತ ಕಳೆಯುವಂತಾಗಿದೆ. ಈ ಕುರಿತು ಪ್ರಯಾಣಿಕರು ಮಾಧ್ಯಮಗಳ ಜೊತೆಗೆ ಮಾತನಾಡಿ ಇಂಡಿಗೋ ವಿಮಾನಯಾನ ಸಂಸ್ಥೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ವಿಮಾನ ನಿಲ್ದಾಣದ ಸಿಬ್ಬಂದಿ ತಮಗೆ ಸರಿಯಾದ ಮಾಹಿತಿ ನಿಡುತ್ತಿಲ್ಲ. ಕೊನೆಯ ಕ್ಷಣದಲ್ಲಿ ವಿಮಾನ ಹಾರಾಟ ರದ್ದಾಗಿದೆ ಅಂತಾ ಹೇಳುತ್ತಿದ್ದು, ಮುಂದಿನ ಎರಡು ದಿನಗಳಲ್ಲಿ ನಿಮ್ಮ ಹಣ ಮರುಪಾವತಿ ಆಗುತ್ತೆ […]

ಮತ್ತಷ್ಟು ಓದಿ..

ಭೀಕರ ರಸ್ತೆ ಅಪಘಾತ ಸಿಪಿಐ ಪಂಚಾಕ್ಷರಿ ಸಾಲಿಮಠ ಸಜೀವ ದಹನ: ಕಂಬನಿ ಮಿಡಿದ ಪೊಲೀಸ್ ಇಲಾಖೆ

ಧಾರವಾಡ: ಭೀಕರ ರಸ್ತೆ ಅಪಘಾತದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಅಣ್ಣಿಗೇರಿ ಹೊರವಲಯದಲ್ಲಿ ನಡೆದಿದೆ. ಪ್ರಸ್ತುತ ಹಾವೇರಿಯಲ್ಲಿ ಲೋಕಾಯುಕ್ತ ಸಿಪಿಐ ಆಗಿ ಕರ್ತವ್ಯದಲ್ಲಿದ್ದ 2003 ರ ಬ್ಯಾಚ್ ನ ದಕ್ಷ ಅಧಿಕಾರಿ ಪಂಚಾಕ್ಷರಿ ಸಾಲೀಮಠ ಮೃತ ದುರ್ದೈವಿಯಾಗಿದ್ದು, ಕರ್ನಾಟಕ ಪೊಲೀಸ್ ಇಲಾಖೆ ಸೇರಿದಂತೆ ಪಂಚಾಕ್ಷರಿ ಸಾಲಿಮಠ ಅವರ ಆಪ್ತ ವರ್ಗ ಕಂಬನಿ ಮಿಡಿದಿದೆ. ಬೈಲಹೊಂಗಲ, ಗದಗ, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಹಲವೆಡೆ ಕರ್ತವ್ಯ ನಿರ್ವಹಿಸಿದ್ದ ಇವರು ಸಧ್ಯ ಹಾವೇರಿಯ ಲೋಕಾಯುಕ್ತ ಸಿಪಿಐ […]

ಮತ್ತಷ್ಟು ಓದಿ..

ದೆಹಲಿಯಲ್ಲಿ ಆಕ್ಟೀವ್ ಆದ ರೆಬೆಲ್ ಟಿಂ: ಬದಲಾಗುತ್ತಾ ವಿಜಯೇಂದ್ರ ರಾಜ್ಯಾಧ್ಯಕ್ಷ ಪಟ್ಟ.!?

ದೆಹಲಿ: ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ರಾಜಕೀಯ ಚದುರಂಗದಾಟ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿತಾ ಅನ್ನೋ ಚರ್ಚೆ ರಾಜಕೀಯ ಪಡಸಾಲೆಯಲ್ಲಿ ಸದ್ದಿಲ್ಲದೇ ಗದ್ದಲವೇಬಿಸಿದೆ. ಕಾಂಗ್ರೆಸ್‌ನಲ್ಲಿ ಸಿಎಂ ಖುರ್ಚಿ ಕದನ ಮುನ್ನೆಲೆಯಲ್ಲಿರುವಾಗಲೇ ರಾಜ್ಯ ಬಿಜೆಪಿಯಲ್ಲೂ ರೆಬೆಲ್ಸ್ ನಾಯಕರ ಟೀಮ್ ಮತ್ತೆ ಸಕ್ರಿಯವಾಗಿದೆ. ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಕುಮಾರ್ ಬಂಗಾರಪ್ಪ, ಶ್ರೀಮಂತ್ ಪಾಟೀಲ್, ಬಿ.ವಿ. ನಾಯಕ್, ಬಿ.ಪಿ. ಹರೀಶ್, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಮತ್ತು ಎನ್.ಆರ್. ಸಂತೋಷ್ ಸೇರಿದಂತೆ ಹಲವು ನಾಯಕರು ದೆಹಲಿಗೆ ತೆರಳಿದ್ದು, ಕೇಂದ್ರ ಗೃಹ ಸಚಿವ […]

ಮತ್ತಷ್ಟು ಓದಿ..

ಪಂಚ ಗ್ಯಾರಂಟಿ ಕಾರ್ಯಗಾರ: ಫಲಾನುಭವಿಗಳ ಪ್ರಗತಿ ಸಮಾವೇಶ

ಬೆಳಗಾವಿ, ನ.30(ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರ ಬಡವರ ಪರವಾಗಿದ್ದು, ಸುಮಾರು 70 ವರ್ಷಗಳಿಂದ ಪ್ರತಿ ಸರ್ಕಾರದ ಅವಧಿಯಲ್ಲಿ ಭೂಮಿ ಮಂಜೂರು, ಶೈಕ್ಷಣಿಕ ಪ್ರಗತಿ, ಸಾರಿಗೆ ವ್ಯವಸ್ಥೆ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಸ್ತುತ ರಾಜ್ಯ ಸರ್ಕಾರದ ಅವಧಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ದೇಶಕ್ಕೆ ಮಾದರಿಯಾಗಿದೆ ಎಂದು ಲೋಕೋಪಯೋಗಿ ಹಾಗೂ ಸತೀಶ ಜಾರಕಿಹೊಳಿ ಅವರು ತಿಳಿಸಿದರು. ನಗರದ ಕುಮಾರ ಗಂದರ್ವ ರಂಗಂಮದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಇವರ ಸಹಯೋಹದಲ್ಲಿ ರವಿವಾರ (ನ.30) ಜರುಗಿದ […]

ಮತ್ತಷ್ಟು ಓದಿ..

ಹಾಸ್ಯ ನಟ ಉಮೇಶ್ ರವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಬೆಂಗಳೂರು, ನವೆಂಬರ್ 30 : ಸುಮಾರು 900 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಖ್ಯಾತ ಹಾಸ್ಯ ನಟರಾಗಿದ್ದ ಉಮೇಶ್ ರವರ ನಿಧನದಿಂದ ದು:ಖ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದರು. ಅವರು ಇಂದು ಚಲನಚಿತ್ರ ನಟ ಉಮೇಶ್ ರವರ ಪಾರ್ಥೀವ ಶರೀರವನ್ನು ದರ್ಶನ ಮಾಡಿ ಕುಟುಂಬಕ್ಕೆ ಸಾಂತ್ವನ ತಿಳಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್ ರವರು ನಿಧನರಾಗಿದ್ದಾರೆ. ಮೈಸೂರಿನವರಾದ ಉಮೇಶ್ ರವರು ತಮ್ಮ ಕಿರಿಯ ವಯಸ್ಸಿನಲ್ಲಿಯೇ ರಂಗಭೂಮಿಯ ನಟರಾಗಿ, ನಂತರ […]

ಮತ್ತಷ್ಟು ಓದಿ..

ಡಿ.1 ಉದ್ಯೋಗಾಂಕ್ಷಿಗಳ ಧಾರವಾಡ ಚಲೋ ಹೋರಾಟ: ಅನುಮತಿ ನಿರಾಕರಿಸಿದ ಪೊಲೀಸ್ ಇಲಾಖೆ

ಧಾರವಾಡ: ರಾಜ್ಯ ಸರ್ಕಾರ ಯಾವುದೇ ಸರ್ಕಾರಿ ಉದ್ಯೋಗಗಳ ನೇಮಕಾತಿ ಮಾಡಿಕೊಳ್ಳುತ್ತಿಲ್ಲ ಮತ್ತು ವಯೋಮಿತಿ ಸಡಿಲಿಕೆ ಕೂಡ ಮಾಡುತ್ತಿಲ್ಲ ಎಂದು ಸರ್ಕಾರದ ವಿರುದ್ದ ರೊಚ್ಚಿಗೆದ್ದಿರುವ ವಿದ್ಯಾರ್ಥಿ ಸಂಘಟನೆ ಮತ್ತು ಸಾವಿರಾರು ಉದ್ಯೋಗಾಕಾಂಕ್ಷಿಗಳು ನಾಳೆ ಡಿಸೆಂಬರ್ 1ನೇ ತಾರೀಖಿನಂದು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ಆಯೋಜನೆ ಮಾಡಲು ಮುಂದಾಗಿದ್ದು, ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ. ಡಿಸೆಂಬರ್ 1 ಕ್ಕೆ ಧಾರವಾಡ ಚಲೋ‌ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ಆಯೋಜನೆ ಮಾಡಿ ಈ ಕುರಿತು ಸಾಮಾಜಿಕ ಜಾಲ ತಾಣದಲ್ಲಿ ಕರೆ ನೀಡಲಾಗಿದೆ. ವಯೋಮಿತಿ ಸಡಿಲಿಕೆ, […]

ಮತ್ತಷ್ಟು ಓದಿ..

ಮಂಡ್ಯ ಭೂವರಾಹನಾಥ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ ದಂಪತಿ: ತಿಹಾರ ಜೈಲು ನೆನೆದ ಡಿಸಿಎಂ

ಮಂಡ್ಯ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದು ಮಂಡ್ಯ ಜಿಲ್ಲೆಯ ಸುಪ್ರಸಿದ್ಧ ಭೂವರಾಹನಾಥ ದೇವಾಲಯಕ್ಕೆ ದಂಪತಿ ಸಮೇತ ಭೇಟಿ ನೀಡಿ ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದ ಡಿಕೆಶಿ ಭೂವರಾಹನಾಥ ದೇವಾಲಯದ ಹಿನ್ನೆಲೆ ಮತ್ತು ತಮ್ಮ ವೈಯಕ್ತಿಕ ಅನುಭವಗಳನ್ನು ಮೆಲುಕು ಹಾಕಿದ್ರು. ಭೂವರಾಹನಾಥ ದೇವಾಲಯಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ದಂಪತಿ ವಿವಿಧ ಪೂಜಾ ಕಾರ್ಯಗಳಲ್ಲಿ ಭಾಗಿಯಾದರು. ಪೂಜೆಯ ಭಾಗವಾಗಿ ಹೋಮ ಕುಂಡಕ್ಕೆ ಪೂರ್ಣಾಹುತಿ ಸಲ್ಲಿಸಿದ […]

ಮತ್ತಷ್ಟು ಓದಿ..

ವಿಶೇಷಚೇತನರಿಗೆ ಪ್ರತ್ಯೇಕ ನಿಗಮ/ಮಂಡಳಿ ರಚನೆಗೆ ಮುಖ್ಯಮಂತ್ರಿಗೆ ಸಚಿವ ಸಂತೋಷ್ ಲಾಡ್ ಪತ್ರ

ಬೆಂಗಳೂರು: ಸರ್ಕಾರದ ಸವಲತ್ತುಗಳನ್ನು ತ್ವರಿತವಾಗಿ ಮತ್ತು ನೇರವಾಗಿ ತಲುಪಿಸಲು ಸಾಧ್ಯವಾಗುವಂತೆ ವಿಶೇಷ ಚೇತನರಿಗಾಗಿಯೇ ಒಂದು ಪ್ರತ್ಯೇಕ ನಿಗಮ ಅಥವಾ ಮಂಡಳಿಯ ಸ್ಥಾಪನೆಯ ಅಗತ್ಯವಿದೆ ಎಂದು ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಪ್ರತಿಪಾದಿಸಿದ್ದಾರೆ. ಈ ವಿಷಯದ ಸಂಬಂಧ ಶುಕ್ರವಾರ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿರುವ ಸಚಿವರು, ಸದ್ಯ ವಿಶೇಷಚೇತನರ ಇಲಾಖೆಯು ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಹಾಗೂ ಹಿರಿಯ ನಾಗರಿಕರನ್ನು ಒಳಗೊಂಡ ಇಲಾಖೆಯಲ್ಲಿ ಇರುವುದರಿಂದ, ಈ ಇಲಾಖೆಯು ಬಹಳ […]

ಮತ್ತಷ್ಟು ಓದಿ..

ಸಿಎಂ ಖುರ್ಚಿ ಕದನ ಉಭಯ ನಾಯಕರ ಜಂಟಿ ಸುದ್ದಿಗೋಷ್ಠಿ: ರಾಜಕೀಯ ಮೇಲಾಟಕ್ಕೆ ತಾತ್ಕಾಲಿಕ ವಿರಾಮ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ ತೆರಳಿ ಬ್ರೇಕ್ ಫಾಸ್ಟ್ ಮೀಂಟಿಂಗ್ ನಲ್ಲಿ ಭಾಗವಹಿಸಿದರು. ಇದೇ ವೇಳೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿಸಿಎಂ ಅವರನ್ನು ಸಿಎಂ ಸಿದ್ದರಾಮಯ್ಯ ಬರಮಾಡಿಕೊಂಡರು. ಸಿಎಂ ನಿವಾಸದಲ್ಲೇ ಉಭಯ ನಾಯಕರು ಉಪಹಾರ ಮಾಡುತ್ತ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ಬ್ರೇಕ್ ಫಾಸ್ಟ್ ಮುಗಿಸಿ ಉಭಯ ನಾಯಕರು ನಗುನಗುತ್ತಲೇ ಹೊರಬಂದು ಜಂಟಿ ಸುದ್ದಿಗೋಷ್ಠಿ ನಡೆಸಿ ಪತ್ರಕರ್ತರೊಂದಿಗೆ ಮಾತನಾಡಿದರು. ನಾನು, ಡಿ.ಕೆ.ಶಿವಕುಮಾರ್ ಹಾಗೂ ಪೊನ್ನಣ್ಣ ಬ್ರೇಕ್ […]

ಮತ್ತಷ್ಟು ಓದಿ..