ಬೆಳಗಾವಿ ಅಧಿವೇಶನ ಪ್ರತಿಭಟನೆಯ ವೇದಿಕೆ, ಪಿಕ್‌ನಿಕ್ ಎಂಬ ಭಾವ ಸರಿಯಲ್ಲ: ಸಚಿವ ಎಚ್.ಕೆ.ಪಾಟೀಲ್
ಹುಬ್ಬಳ್ಳಿ: ಬೆಳಗಾವಿ ಅಧಿವೇಶನವು ಪ್ರತಿಭಟನೆಯ ವೇದಿಕೆ, ಪಿಕ್‌ನಿಕ್ ಎಂಬ ಭಾವದಿಂದ ನಡೆದುಕೊಳ್ಳುವುದು ಸರಿಯಲ್ಲ. ಅಧಿವೇಶನದ ಪಾವಿತ್ರ್ಯ ಮತ್ತು ಶಕ್ತಿಯನ್ನು ಕುಂದಿಸುವ ಕೆಲಸ ಆಗಬಾರದು ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ, ಶಾಸಕರು ಮತ್ತು ವಿಪಕ್ಷಗಳಿಗೆ ಕರೆ ನೀಡಿದರು. ಭಾನುವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ಅಸಮಾನತೆ ದೂರಮಾಡಲು ಉತ್ತರ ಕರ್ನಾಟಕ ಮತ್ತು ಸಮಗ್ರ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚಿಸುವ ಜವಾಬ್ದಾರಿ ಶಾಸಕರ ಮೇಲಿದೆ ಎಂದರು. ಸಾಮಾಜಿಕ ಬಹಿಷ್ಕಾರ ನಿಷೇಧ, ಧಾರ್ಮಿಕ ಸಂಸ್ಥೆಗಳ ಪರಿಣಾಮಕಾರಿ ನಿರ್ವಹಣೆ, ಹಸ್ತಪ್ರತಿಗಳ […]
ಮತ್ತಷ್ಟು ಓದಿ..
