ನಮ್ಮೂರ ಶಾಲೆ ಮುಚ್ಚಲು ಬಿಡುವುದಿಲ್ಲ: ಸರ್ಕಾರಕ್ಕೆ ಸೆಡ್ಡು ಹೊಡೆದ ಹೊನ್ನಿಹಾಳ ಗ್ರಾಮಸ್ಥರು

ಬೆಳಗಾವಿ: ಏಳು ದಶಕಗಳಿಗೂ ಹಿರಿದಾದ ನಮ್ಮೂರ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ‌ ಎಂದು ಬೆಳಗಾವಿ ತಾಲೂಕಿನ ಹೊನ್ನಿಹಾಳ ಗ್ರಾಮಸ್ಥರು ಊರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರು ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಬೇಕೆ ಬೇಕು ನ್ಯಾಯ ಬೇಕು ಅಂತ ತಮ್ಮೂರಿನ ಶಾಲೆಯ ಉಳಿವಿಗಾಗಿ ಸರ್ಕಾರದ ವಿರುದ್ಧ ಒಕ್ಕೊರಲಿನಿಂದ ಧ್ವನಿಯೆತ್ತಿದರು. ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ರಾಜ್ಯ ಸರ್ಕಾರ ಮುಚ್ಚಲು ಮುಂದಾಗಿದೆ. ಈ ಯೋಜನೆ ಭಾಗವಾಗಿ ಬಾಳೆಕುಂದ್ರಿ ಬಿಕೆ ಉರ್ದು […]

ಮತ್ತಷ್ಟು ಓದಿ..

ಡಿ.1 ಉದ್ಯೋಗಾಂಕ್ಷಿಗಳ ಧಾರವಾಡ ಚಲೋ ಹೋರಾಟ: ಅನುಮತಿ ನಿರಾಕರಿಸಿದ ಪೊಲೀಸ್ ಇಲಾಖೆ

ಧಾರವಾಡ: ರಾಜ್ಯ ಸರ್ಕಾರ ಯಾವುದೇ ಸರ್ಕಾರಿ ಉದ್ಯೋಗಗಳ ನೇಮಕಾತಿ ಮಾಡಿಕೊಳ್ಳುತ್ತಿಲ್ಲ ಮತ್ತು ವಯೋಮಿತಿ ಸಡಿಲಿಕೆ ಕೂಡ ಮಾಡುತ್ತಿಲ್ಲ ಎಂದು ಸರ್ಕಾರದ ವಿರುದ್ದ ರೊಚ್ಚಿಗೆದ್ದಿರುವ ವಿದ್ಯಾರ್ಥಿ ಸಂಘಟನೆ ಮತ್ತು ಸಾವಿರಾರು ಉದ್ಯೋಗಾಕಾಂಕ್ಷಿಗಳು ನಾಳೆ ಡಿಸೆಂಬರ್ 1ನೇ ತಾರೀಖಿನಂದು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ಆಯೋಜನೆ ಮಾಡಲು ಮುಂದಾಗಿದ್ದು, ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ. ಡಿಸೆಂಬರ್ 1 ಕ್ಕೆ ಧಾರವಾಡ ಚಲೋ‌ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ಆಯೋಜನೆ ಮಾಡಿ ಈ ಕುರಿತು ಸಾಮಾಜಿಕ ಜಾಲ ತಾಣದಲ್ಲಿ ಕರೆ ನೀಡಲಾಗಿದೆ. ವಯೋಮಿತಿ ಸಡಿಲಿಕೆ, […]

ಮತ್ತಷ್ಟು ಓದಿ..

“ಶಾಲೆಯ ಅಂಗಳದಲ್ಲಿ ತಾರಾಲಯ” ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ: “ಗ್ರಾಮೀಣ ಮಕ್ಕಳಲ್ಲಿ ವಿಜ್ಞಾನ ಕೌತುಕ ಬಿತ್ತುವುದು ನಮ್ಮ ಗುರಿ”

ಬೆಂಗಳೂರು, ನವೆಂಬರ್ 27: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ವಿಜ್ಞಾನ ಶಿಕ್ಷಣವನ್ನು ತಲುಪಿಸುವ ಮಹತ್ವಾಕಾಂಕ್ಷಿ “ಶಾಲೆಯ ಅಂಗಳದಲ್ಲಿ ತಾರಾಲಯ” ಡಿಜಿಟಲ್ ಮೊಬೈಲ್ ಪ್ಲಾನೆಟೇರಿಯಂ ಯೋಜನೆಗೆ ಇಂದು ವಿಧಾನಸೌಧದ ಆವರಣದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಹಸಿರು ನಿಶಾನೆ ತೋರಿಸುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿಗಳು, “ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಖಗೋಳ ವಿಜ್ಞಾನದ ಕೌತುಕವನ್ನು ಬಿತ್ತಿ, ವಿಜ್ಞಾನ ಕಲಿಕೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ. ಈ ಯೋಜನೆ […]

ಮತ್ತಷ್ಟು ಓದಿ..