‘ಸಿದ್ದರಾಮಯ್ಯ ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿಲ್ಲ’; ಸಚಿವ ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸದಿರಬಹುದು ಎಂದು ಹೇಳಿರುವುದನ್ನು ಚುನಾವಣಾ ರಾಜಕಾರಣದಿಂದ ನಿವೃತ್ತಿ ಎಂದು ಅರ್ಥೈಸಬಾರದು ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಚುನಾವಣೆಗೆ ಸ್ಪರ್ಧಿಸದಿರಬಹುದು ಎಂದು ಹೇಳಿದ್ದಾರೆಯೇ ಹೊರತು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುವುದಾಗಿ ಹೇಳಿಲ್ಲ ಎಂದು ತಿಳಿಸಿದರು. ಸಿದ್ದರಾಮಯ್ಯ ಅವರು ತಾವು ಮುಂದಿನ ಚುನಾವಣೆಗೆ ರಾಜಕೀಯ ನಿವೃತ್ತಿ ಪಡೆಯಬಹುದು ಎಂದು ಹೇಳಿದ್ದರೂ, ಸಮಾಜದಲ್ಲಿರುವ ದುರ್ಬಲರು ಹಾಗೂ ಶೋಷಿತರ ಪರವಾಗಿ ಧ್ವನಿ ಎತ್ತುವ […]

ಮತ್ತಷ್ಟು ಓದಿ..

ಪತ್ರಕರ್ತರ ಸೋಗಿನಲ್ಲಿ ಸುಲಿಗೆಗಿಳಿದಿದ್ದ ನಾಲ್ವರು ಯೂಟ್ಯೂಬರ್‌ಗಳ ಹೆಡೆಮುರಿ ಕಟ್ಟಿದ ಹುಕ್ಕೇರಿ ಪೊಲೀಸರು!

ಬೆಳಗಾವಿ: ಮಾಧ್ಯಮ ಕ್ಷೇತ್ರದ ಹೆಸರು ದುರ್ಬಳಕೆ ಮಾಡಿಕೊಂಡು, ಗಾಂಜಾ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ನಾಲ್ವರು ‘ಯೂಟ್ಯೂಬ್‌’ ಪತ್ರಕರ್ತರನ್ನು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ. ವಸೂಲಿಯನ್ನೇ ತಮ್ಮ ಮುಖ್ಯ ಕಾಯಕವಾಗಿಸಿಕೊಂಡಿದ್ದ ಈ ಖದೀಮರ ಜಾಲವನ್ನು ಜಾಲಾಡಿದ ಹುಕ್ಕೇರಿ ಪೊಲೀಸರು, ಸದ್ಯ ನಾಲ್ವರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಘಟನೆಯ ಹಿನ್ನೆಲೆ ಏನು? ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಗ್ರಾಮದ ನಿವಾಸಿ ಮೆಹಬೂಬ್ ಜಮಾದಾರ್ ಎಂಬುವವರನ್ನು ಗುರಿಯಾಗಿಸಿಕೊಂಡಿದ್ದ ಈ […]

ಮತ್ತಷ್ಟು ಓದಿ..

ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ: ಬ್ರೈನ್ ಡೆಡ್ ವ್ಯಕ್ತಿಯ ಅಂಗಾಂಗ ದಾನ; ಬಾಗಲಕೋಟೆ ಟು ಬೆಳಗಾವಿ ವರೆಗೆ ಗ್ರೀನ್ ಕಾರಿಡಾರ್

ಬಾಗಲಕೋಟೆ/ಬೆಳಗಾವಿ:‌ ರೈಲು ಅಪಘಾತದಲ್ಲಿ ಸಿಲುಕಿ ತಲೆಗೆ ತೀವ್ರ ಪೆಟ್ಟಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿಯೊಬ್ಬರ ಅಂಗಾಂಗಗಳನ್ನು ದಾನ ಮಾಡಲು ಅವರ ಕುಟುಂಬಸ್ಥರು ಒಪ್ಪಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬಾಗಲಕೋಟೆಯ ಆಸ್ಪತ್ರೆಯಿಂದ ಬೆಳಗಾವಿಯ ಜೆ.ಎನ್.ಎಂ.ಸಿ ಆಸ್ಪತ್ರೆಗೆ ರೋಗಿಯನ್ನು ತಲುಪಿಸಲು ಪೊಲೀಸರು ‘ಗ್ರೀನ್ ಕಾರಿಡಾರ್’ ‘ಜೀರೋ ಟ್ರಾಫಿಕ್’ ವ್ಯವಸ್ಥೆ ಮಾಡುವ ಮೂಲಕ ಸಕಾಲದಲ್ಲಿ ಅಂಗಾಂಗ ದಾನ ಪ್ರಕ್ರಿಯೆ ಯಶಸ್ವಿಯಾಗಲು ನೆರವಾಗಿದ್ದಾರೆ. ಧಾರವಾಡದ ರೈಲ್ವೆ ನಿಲ್ದಾಣದಲ್ಲಿ 55 ವರ್ಷದ ದುಂಡಪ್ಪ ಎಂಬುವವರು ರೈಲು ಹತ್ತುವ ಭರದಲ್ಲಿ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದರು. ಈ […]

ಮತ್ತಷ್ಟು ಓದಿ..

ದಕ್ಷಿಣ ಭಾರತದ ಗಾನಕೋಗಿಲೆ, ಖ್ಯಾತ ಗಾಯಕಿ ಎಸ್. ಜಾನಕಿ ವಿಧಿವಶ!

ಮೈಸೂರು: ದಕ್ಷಿಣ ಭಾರತದ ಚಿತ್ರರಂಗದ ಅಪ್ರತಿಮ ಗಾಯಕಿ, ಕೋಟ್ಯಂತರ ಸಂಗೀತ ಪ್ರೇಮಿಗಳ ಮನಗೆದ್ದ ‘ಗಾನಕೋಗಿಲೆ’ ಎಸ್. ಜಾನಕಿ (ಶಿಸ್ಟ್ಲಾ ಜಾನಕಿ) ಅವರು ಇಂದು ಶನಿವಾರ ಜುಲೈ 11, 2026 ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಉನ್ನತ ಮೂಲಗಳ ಪ್ರಕಾರ, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮೈಸೂರಿನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತೀವ್ರ ಹೃದಯಾಘಾತದಿಂದ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯಕೀಯ ಮೂಲಗಳು ಖಚಿತಪಡಿಸಿವೆ. ಅವರ ನಿಧನದೊಂದಿಗೆ ಭಾರತೀಯ ಚಿತ್ರರಂಗದ ಸುವರ್ಣ […]

ಮತ್ತಷ್ಟು ಓದಿ..

ಮುಖ್ಯ ರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕಿಲ್ಲ ಅವಕಾಶ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಎಚ್ಚರಿಕೆ: ಸಿಎಂ ಡಿ.ಕೆ.ಶಿವಕುಮಾರ್

ಬೆಳಗಾವಿ: ರಾಜಧಾನಿ ಬೆಂಗಳೂರಿನ ಸಾರ್ವಜನಿಕರ ಸುಗಮ ಸಂಚಾರ ಹಾಗೂ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮುಖ್ಯ ರಸ್ತೆಗಳಲ್ಲಿ ಯಾವುದೇ ಕಾರಣಕ್ಕೂ ಬೀದಿ ಬದಿಯ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಸ್ತೆಬದಿ ವ್ಯಾಪಾರಿಗಳ ಪುನರ್ವಸತಿ ಮತ್ತು ನಗರದ ಸೌಂದರ್ಯೀಕರಣದ ಕುರಿತು ಸರ್ಕಾರದ ನಿಲುವನ್ನು ಕಡಕ್ ಆಗಿ ತಿಳಿಸಿದರು. ಸರ್ವಪಕ್ಷ ಶಾಸಕರ ಒಮ್ಮತದ ಅಭಿಪ್ರಾಯ: ತಾವು ಈ ಹಿಂದೆ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ಅವಧಿಯನ್ನು […]

ಮತ್ತಷ್ಟು ಓದಿ..

ಖಾಸಗಿ ಹೋಟೆಲ್‌ನಲ್ಲಿ ಶಾಸಕರಿಗೆ ಸಿಎಂ ಡಿಕೆಶಿ ಔತಣಕೂಟ: ಸ್ಥಳೀಯ ನಾಯಕರ ವಿಶ್ವಾಸಗಳಿಸಲು ಮುಂದಾದ ಮುಖ್ಯಮಂತ್ರಿ.

ಬೆಳಗಾವಿ: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಕುಂದಾನಗರಿ ಬೆಳಗಾವಿಗೆ ಆಗಮಿಸಿರುವ ಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ನಗರದ ಪ್ರತಿಷ್ಠಿತ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿಗಳು ಕಾಂಗ್ರೆಸ್ ಶಾಸಕರು ಹಾಗೂ ಪ್ರಮುಖ ನಾಯಕರಿಗಾಗಿ ವಿಶೇಷ ‘ಡಿನ್ನರ್ ಮೀಟಿಂಗ್’ (ಔತಣಕೂಟ) ಆಯೋಜಿಸಿದ್ದರು. ಉಸ್ತುವಾರಿ ಸಚಿವರು ಸೇರಿ ಪ್ರಮುಖ ನಾಯಕರ ಭಾಗಿ ಈ ಹೈಪ್ರೊಫೈಲ್ ಡಿನ್ನರ್ ಮೀಟಿಂಗ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಜಿಲ್ಲೆಯ […]

ಮತ್ತಷ್ಟು ಓದಿ..

ಬೆಳಗಾವಿ ಸುವರ್ಣ ಸೌಧದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಸುದ್ಧಿಗೋಷ್ಠಿ: ಕೃಷಿ, ನೀರಾವರಿ ಹಾಗೂ ಆಡಳಿತ ಸುಧಾರಣೆಗೆ ದಿಕ್ಸೂಚಿ

ಬೆಳಗಾವಿ: ಕಿತ್ತೂರು ಕರ್ನಾಟಕ ಭಾಗದ ಅಭಿವೃದ್ಧಿ, ಜಲಸಂಪನ್ಮೂಲ ನಿರ್ವಹಣೆ ಹಾಗೂ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸುವರ್ಣ ಸೌಧದಲ್ಲಿ ವಿಭಾಗ ಮಟ್ಟದ ಶಾಸಕರು ಮತ್ತು ಅಧಿಕಾರಿಗಳ ಮಹತ್ವದ ಸಭೆ ನಡೆಸಿ, ಬಳಿಕ ಸುದ್ಧಿಗೋಷ್ಠಿಯಲ್ಲಿ ಸರ್ಕಾರದ ಹಲವು ಐತಿಹಾಸಿಕ ತೀರ್ಮಾನಗಳನ್ನು ಪ್ರಕಟಿಸಿದರು.ರಾಜ್ಯದ ಹಿತದೃಷ್ಟಿಯಿಂದ ಪಕ್ಷಾತೀತವಾಗಿ ಎಲ್ಲ ಶಾಸಕರನ್ನು ಈ ಸಭೆಗೆ ಆಹ್ವಾನಿಸಲಾಗಿತ್ತು ಎಂದು ತಿಳಿಸಿದ ಸಿಎಂ, ಪ್ರಸ್ತುತ ಎದುರಾಗಿರುವ ನೀರಿನ ಬಿಕ್ಕಟ್ಟು ಮತ್ತು ಕೃಷಿ ಸವಾಲುಗಳನ್ನು ಎದುರಿಸಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದರು. […]

ಮತ್ತಷ್ಟು ಓದಿ..

ಗೃಹಲಕ್ಷ್ಮಿಗೆ ಕೇಂದ್ರದ ಆಯೋಗವೇ ಫಿದಾ: ವಿಪಕ್ಷಗಳ ‘ಹಗರಣ’ದ ಆರೋಪಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಕೌಂಟರ್

ಬೆಳಗಾವಿ: ಕರ್ನಾಟಕ ಸರ್ಕಾರದ ಅತ್ಯಂತ ಜನಪ್ರಿಯ ‘ಗೃಹಲಕ್ಷ್ಮಿ’ ಯೋಜನೆ ಇಂದು ಇಡೀ ದೇಶಕ್ಕೇ ಮಾದರಿಯಾಗಿದ್ದು, ವಿಪಕ್ಷಗಳ ಟೀಕೆಗಳ ನಡುವೆಯೂ ಕೇಂದ್ರದ ಆಯೋಗವೇ ಈ ಯೋಜನೆಗೆ ಭೇಷ್ ಎಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.‌ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣದ ಪ್ರಚಲಿತ ವಿದ್ಯಮಾನಗಳು, ಬೆಳಗಾವಿ ಜಿಲ್ಲೆಯ ಸಚಿವ ಸ್ಥಾನದ ಬೇಡಿಕೆ ಹಾಗೂ ವಿರೋಧ ಪಕ್ಷಗಳ ಆರೋಪಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ಕೇಂದ್ರ ಆಯೋಗದಿಂದಲೇ ಪ್ರಶಂಸೆ: ಬೇರೆ ರಾಜ್ಯಗಳಿಂದ […]

ಮತ್ತಷ್ಟು ಓದಿ..

ಡಿ.ಕೆ. ಶಿವಕುಮಾರ್ ಸಿಎಂ ಆಗಿ ಮೊದಲ ಬಾರಿಗೆ ಬೆಳಗಾವಿಗೆ: ಜಿಲ್ಲೆಯ ಬದಲಾವಣೆಯ ನಿರೀಕ್ಷೆಯಲ್ಲಿ ಅಂಜಲಿ ನಿಂಬಾಳ್ಕರ್!

ಬೆಳಗಾವಿ: ರಾಜ್ಯ ರಾಜಕಾರಣದ ಪ್ರಮುಖ ವಿದ್ಯಮಾನಗಳ ನಡುವೆ, ಬೆಳಗಾವಿ ಜಿಲ್ಲೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭೇಟಿ ಭಾರಿ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಈ ಕುರಿತು ಮಾತನಾಡಿರುವ ಖಾನಾಪುರ ಕ್ಷೇತ್ರದ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್, “ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಬೆಳಗಾವಿ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಅವರ ಈ ಭೇಟಿಯಿಂದ ನಮ್ಮ ಜಿಲ್ಲೆಯಲ್ಲಿ ದೊಡ್ಡ ಬದಲಾವಣೆಯಾಗಲಿದೆ ಎನ್ನುವ ಅಪಾರ ನಿರೀಕ್ಷೆ ನಮಗಿದೆ,” ಎಂದು ಆಶಾವಾದ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಜಿಲ್ಲೆಯ ಬೆನ್ನೆಲುಬಾಗಿರುವ ರೈತರ ಸಮಸ್ಯೆಗಳ ಕುರಿತು […]

ಮತ್ತಷ್ಟು ಓದಿ..

ಎರಡನೇ ಹಂತದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನ ಫಿಕ್ಸ್: ಸಿಎಂ ಡಿಕೆಶಿಯಿಂದ ಬೆಳಗಾವಿಗೆ ವಿಶೇಷ ಪ್ಯಾಕೇಜ್ ನಿರೀಕ್ಷೆ – ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನಾರಚನೆ ಹಾಗೂ ವಿಸ್ತರಣೆಯ ಚಟುವಟಿಕೆಗಳು ಗರಿಗೆದರಿರುವ ಬೆನ್ನಲ್ಲೇ, ದ್ವಿತೀಯ ಹಂತದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ಸಿಗುವುದು ಖಚಿತ ಎಂದು ಅವರ ಸಹೋದರ ಹಾಗೂ ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ ತೀವ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.‌ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸುದೀರ್ಘ ರಾಜಕೀಯ ಸೇವೆ ಹಾಗೂ ಪಕ್ಷ ಸಂಘಟನೆಯನ್ನು ಹೈಕಮಾಂಡ್ ಗುರುತಿಸಲಿದೆ ಎಂದರು. 27 ವರ್ಷಗಳ ಸೇವೆ, ‘ಗೃಹಲಕ್ಷ್ಮಿ’ […]

ಮತ್ತಷ್ಟು ಓದಿ..