ಆನೆ ದಾಳಿ 70 ವರ್ಷದ ವೃದ್ದ ಸಾವು

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ‌ ಬಿಳಿಗಿರಿರಂಗನಾಥಸ್ವಾಮಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ನಲ್ಲಿಕತ್ರಿ ಗ್ರಾಮದಲ್ಲಿ  ಆನೆ ದಾಳಿಗೆ ವೃದ್ದ ಬಲಿಯಾಗಿದ್ದಾನೆ. ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೊಂಬೆಗಲ್ಲು ಪೋಡಿನ ಹಿರಿಯ ಮುಖಂಡ ಶಿಕಾರಿ ಕೇತೇಗೌಡ (70) ಆನೆ ದಾಳಿಯಿಂದ ಮೃತಪಟ್ಟ ದುರ್ದೈವಿ. ಘಟನೆ ವಿವರ: ಪಿ.ಜಿ ಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೊಂಬೆಗಲ್ಲು ಪೋಡಿನ ಹಿರಿಯ ಮುಖಂಡ ಶಿಕಾರಿ ಕೇತೇಗೌಡ ಕೆಲಸ ನಿಮಿತ್ತ ತಮ್ಮ ದ್ವಿಚಕ್ರ ವಾಹನದಲ್ಲಿ ಒಡೆಯರಪಾಳ್ಯ ಗ್ರಾಮಕ್ಕೆ ಬರುತ್ತಿರುವಾಗ ಬೈಲೂರು […]

ಮತ್ತಷ್ಟು ಓದಿ..

ನೈರುತ್ಯ ವಲಯದ ಮಹಾ ಪ್ರಬಂಧಕರು, ಅಧಿಕಾರಿಗಳೊಂದಿಗೆ ಸಂಸದ ಜಗದೀಶ ಶೆಟ್ಟರ್ ಸಭೆ

ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗದೀಶ ಶೆಟ್ಟರ, ಇವರು ಇಂದು ನೈರುತ್ಯ ವಲಯದ ಮಹಾ ಪ್ರಬಂಧಕರು ಹಾಗೂ ಇತರೆ ಅಧಿಕಾರಿಗಳೊಂದಿಗೆ ಬೆಳಗಾವಿ ಲೋಕಸಭಾ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರೇಲ್ವೆ ಇಲಾಖೆ ಕಾಮಗಾರಿಗಳ ಸ್ಥಿತಿಗತಿಯ ಬಗ್ಗೆ ಚರ್ಚಿಸಿದರು. 1) ಬೆಳಗಾವಿ – ಕಿತ್ತೂರು – ಧಾರವಾಡ ನೂತನ ರೈಲು ಮಾರ್ಗ ನಿರ್ಮಾಣ:ಪ್ರಸ್ತಾಪಿತ ನೂತನ ರೈಲು ಮಾರ್ಗ ನಿರ್ಮಾಣ ಕುರಿತು ಸಂಸದರು ಅಧಿಕಾರಿಗಳನ್ನು ಪ್ರಶ್ನಿಸಲಾಗಿ ಕಾಮಗಾರಿ ಪ್ರಾರಂಭಕ್ಕೆ ಅವಶ್ಯವೆನಿಸಿದ ಭೂ ಸಮೀಕ್ಷೆ ಬೆಳಗಾವಿ – […]

ಮತ್ತಷ್ಟು ಓದಿ..

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಧಾನಿಗಳಿಗೆ ಐದು ಅಂಶಗಳ ಮನವಿ ಪತ್ರ ಸಲ್ಲಿಕೆ ಏಮ್ಸ್, ಪ್ರವಾಹ ಪರಿಹಾರ ಹಾಗೂ ನೀರಾವರಿ ಯೋಜನೆಗಳಿಗೆ ತೀರುವಳಿ ನೀಡಲು ಆಗ್ರಹ ನವದೆಹಲಿ, ನವೆಂಬರ್ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದರು. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬು ಬೆಲೆ ನಿಗದಿ, 2100 ಕೋಟಿ ಪ್ರವಾಹ ಪರಿಹಾರ ಹಾಗೂ ಪ್ರಮುಖ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ತೀರುವಳಿಗಳನ್ನು ನೀಡಲು […]

ಮತ್ತಷ್ಟು ಓದಿ..