ರಾಜ್ಯ 7ನೇ ವೇತನ ಆಯೋಗದ ಸಂಪುಟ 1ರ ವರದಿಯ ಶಿಫಾರಸ್ಸು ಪರಿಶೀಲನೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ ಸುವರ್ಣವಿಧಾನಸೌಧ ಡಿ.11 (ಕ.ವಾ.): ವಿಶೇಷ ಚೇತನ ರಾಜ್ಯ ಸರ್ಕಾರಿ ನೌಕರರಿಗೆ ವಾಹನ ಖರೀದಿಗೆ ಪ್ರಸ್ತುತ ನೀಡಲಾಗುತ್ತಿರುವ ಸಹಾಯಧನದ ಪರಿಷ್ಕರಣೆಯನ್ನೂ ಒಳಗೊಂಡಂತೆ ಸರ್ಕಾರಿ ನೌಕರರಿಗೆ ಲಭ್ಯವಿರುವ ವಿವಿಧ ಭತ್ಯೆ ಮತ್ತು ಸೌಲಭ್ಯಗಳ ಪರಿಷ್ಕರಣೆ ಕುರಿತಂತೆ ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ಸಂಪುಟ-1ರ ವರದಿಯಲ್ಲಿನ ಶಿಫಾರಸ್ಸುಗಳು ಪ್ರಸ್ತುತ ಸರ್ಕಾರದ ಪರಿಶೀಲನೆಯಲ್ಲಿರುತ್ತದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹೇಳಿದರು. ಪರಿಷತ್ತಿನಲ್ಲಿ ಡಿ.11ರಂದು ಸದಸ್ಯರಾದ ಬಲ್ಕೀಸ್ ಬಾನು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, 7ನೇ ರಾಜ್ಯ ವೇತನ […]

ಮತ್ತಷ್ಟು ಓದಿ..

ಎಸ್.ನಿಜಲಿಂಗಪ್ಪ ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ, ಡಿಸೆಂಬರ್ 10: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿ. ಎಸ್. ನಿಜಲಿಂಗಪ್ಪರವರ ಜನ್ಮ ದಿನದ ಅಂಗವಾಗಿ ಸುವರ್ಣ ವಿಧಾನಸೌಧದಲ್ಲಿರುವ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿ ಮಾತನಾಡಿದರು. ನಿಜಲಿಂಗಪ್ಪನವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹಾಗೂ ಅವಿಭಜಿತ ಕಾಂಗ್ರೆಸ್ ಪಕ್ಷದ ಎಐಸಿಸಿ ಅಧ್ಯಕ್ಷರಾಗಿದ್ದರು. ಪ್ರಧಾನಿ ಇಂದಿರಾ ಗಾಂಧಿ ಯವರೊಂದಿಗೆ ರಾಜಕೀಯ ಭಿನ್ನಾಭಿಪ್ರಾಯ ಬೆಳೆದು ಬೇರೆ […]

ಮತ್ತಷ್ಟು ಓದಿ..

ಚಿಕ್ಕೋಡಿ, ಗೋಕಾಕ್ ಜಿಲ್ಲೆ ರಚನೆ, ಅಭಿಪ್ರಾಯ ಸಂಗ್ರಹಿಸಿ ಕ್ರಮ: ಕಂದಾಯ ಸಚಿವ ಕೃಷ್ಣ ಭೈರೇಗೌಡ

ಬೆಳಗಾವಿ ಸುವರ್ಣ ವಿಧಾನಸೌಧ ಡಿ.08 (ಕ.ವಾ.): ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿ ಮತ್ತು ಗೋಕಾಕ್ ಗಳನ್ನು ನೂತನ ಜಿಲ್ಲೆಗಳನ್ನಾಗಿ ಘೋಷಿಸುವ ಸಂಬಂಧಪಟ್ಟಂತೆ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿಧಾನಸಭೆಯಲ್ಲಿ ತಿಳಿಸಿದರು. ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರ ಸರ್ಕಾರದ ಗಮನ ಸೆಳಯುವ ಸೂಚನೆಗೆ ಉತ್ತರಿಸಿದ ಸಚಿವರು ದೊಡ್ಡ ಜಿಲ್ಲೆಗಳನ್ನು ಆಡಳಿತಾತ್ಮಕವಾಗಿ ನಿರ್ವಹಣೆ ಮಾಡುವುದು ಕಷ್ಟ. ಇದರಿಂದಾಗಿ ಜನಪರ ಆಡಳಿತ ಕೊಡುವುದು ಕಷ್ಟಸಾಧ್ಯವೆಂಬುದು ಸರ್ಕಾರದ ಗಮನಕ್ಕೆ ಬಂದಿದೆ. ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ […]

ಮತ್ತಷ್ಟು ಓದಿ..

ಸದನದ ಗೌರವವನ್ನು ಎತ್ತಿಹಿಡಿಯಬೇಕು: ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಳಗಾವಿ, ಡಿಸೆಂಬರ್ 09: ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ ದಾರಿತಪ್ಪಿಸದೇ ಸದನದ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಇಂದು ಕಿವಿಮಾತು ಹೇಳಿದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಮಾತನಾಡುವ ಸಂದರ್ಭದಲ್ಲಿ ರೈತರಿಗೆ ಸರ್ಕಾರ ಪರಿಹಾರವನ್ನು ನೀಡಿಲ್ಲ, ರೈತರಿಗೆ ಕೊಡಲು ಸರ್ಕಾರದ ಬಳಿ ಹಣವಿಲ್ಲ ಎಂದಾಗ ಮಧ್ಯ ಪ್ರವೇಶ ಮಾಡಿ ಮಾತನಾಡಿದ […]

ಮತ್ತಷ್ಟು ಓದಿ..

ಬಿಜೆಪಿಗರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ‌.‌ ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು ಬೇಡ ಅಂದೋರು? ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಟೀಕಾಪ್ರಹಾರ ನಡೆಸಿದರು. ಸರ್ಕಾರದ ವಿರುದ್ಧ ಬಿಜೆಪಿಗರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ರೈತರ ಬಗ್ಗೆ ಬಿಜೆಪಿಯವರಿಗೆ ಕರುಣೆ ಬಂದ ಹಾಗೆ ಇದೆ. ರೈತರ ಪರವಾಗಿ ಬಿಜೆಪಿ ಯವರು ಏನು‌ ಮಾಡಿದ್ದಾರೆ ಅಂತ ಒಂದು ಪಟ್ಟಿ ಬಿಡುಗಡೆ ಮಾಡಲಿ.‌ ಅವರಿಗೆ ನಾಚಿಕೆ ಆಗಬೇಕು. […]

ಮತ್ತಷ್ಟು ಓದಿ..

ತ್ರಿವರ್ಣ ಧ್ವಜ ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ, ಡಿಸೆಂಬರ್ 9: ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ, ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ ಮಾಡಿ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು […]

ಮತ್ತಷ್ಟು ಓದಿ..

ಬೆಳಗಾವಿ ಮೃಗಾಲಯದ ಕೃಷ್ಣಮೃಗ ವಿಭಾಗಕ್ಕೆ ಖಂಡ್ರೆ ಭೇಟಿ: ವನ್ಯಮೃಗಗಳ ಬಗ್ಗೆ ಹೆಚ್ಚಿನ ಕಾಳಜಿಗೆ ಸೂಚನೆ

ಬೆಳಗಾವಿ, ಡಿ.8: ಗಳಲೆ ರೋಗದಿಂದ 31 ಕೃಷ್ಣಮೃಗಗಳು ಸಾವನ್ನಪ್ಪಿದ ಭೂತರಾಮನಹಟ್ಟಿ, ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಇಂದು ಭೇಟಿ ನೀಡಿ ಪರಿಶೀಲಿಸಿದ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ವನ್ಯಜೀವಿಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಸೂಚಿಸಿದರು. ಕೃಷ್ಣಮೃಗಗಳ ವಿಭಾಗಕ್ಕೆ ಭೇಟಿ ನೀಡಿ ಪಶುವೈದ್ಯರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಮೃಗಾಲಯದಲ್ಲಿರುವ ಎಲ್ಲ ಪ್ರಾಣಿಗಳ ಆರೋಗ್ಯದ ಬಗ್ಗೆ ನಿಗಾ ಇಡಲು ಮತ್ತು ಲಸಿಕೆಗಳನ್ನು ನೀಡಲು ಸೂಚಿಸಿದರು.ಈ ಸಂದರ್ಭದಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ […]

ಮತ್ತಷ್ಟು ಓದಿ..

ಡಿಸೆಂಬರ್ 9ರಂದು ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಪ್ರದರ್ಶನ

ಬೆಳಗಾವಿ, ಡಿಸೆಂಬರ್ 8 (ಕರ್ನಾಟಕ ವಾರ್ತೆ): ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಡಿಸೆಂಬರ್ 9 ನಾಳೆ ಬೆಳಿಗ್ಗೆ 9.30 ಗಂಟೆಗೆ ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಪ್ರದರ್ಶಿಸಲಾಗುವುದು. ಕಲಬುರ್ಗಿ ಜಿಲ್ಲೆಯ ಕಾಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮನ್ನ ಕುಟುಂಬಸ್ಥರು ವೈಯಕ್ತಿಕ ಆಸಕ್ತಿಯಿಂದ ಮಾಡಲ್ಪಟ್ಟಿರುವ ಈ ಕೆಲಸ ಮತ್ತೊಮ್ಮೆ ಐತಿಹಾಸಿಕವಾಗಲಿದೆ. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪ […]

ಮತ್ತಷ್ಟು ಓದಿ..

ದಿನೇ ದಿನೇ ಬಿಗಡಾಯುಸುತ್ತಿದೆ ಸರ್ಕಾರಿ ಉದ್ಯೋಗದ ಸಮಸ್ಯೆ – ಸರ್ಕಾರ ನೀಡುವುದೇ ಭರವಸೆ?

‘ಕಣ್ಣು ಬಿಡು ಸರ್ಕಾರ’ ಧಾರವಾಡ: ಎಲ್ಲೆಡೆ ಉದ್ಯೋಗಾಕಾಂಕ್ಷಿಗಳ ಆಕ್ರೋಶ. ಮತ್ತೊಂದೆಡೆ ಸರ್ಕಾರಿ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಿಕೊಳ್ಳುತ್ತಿಲ್ಲ ಎಂಬ ಉದ್ಯೋಗಾಕಾಂಕ್ಷಿಗಳ ಹತಾಶ ಭಾವನೆ. ಪೊಲೀಸ್ ಆಯುಕ್ತರ ಎದುರೇ ಕಣ್ಣೀರು ಹಾಕುತ್ತಿರುವ ಉದ್ಯೋಗಾಕಾಂಕ್ಷಿಗಳು. ಇದೆಲ್ಲ ಸದ್ಯದ ಉದ್ಯೋಗಾಕಾಂಕ್ಷಿಗಳ ಪರಿಸ್ಥಿತಿ. ಒಂದೆಡೆ ವಯಸ್ಸು ಮೀರುತ್ತಿದ್ದರೆ, ಮತ್ತೊಂದೆಡೆ ಸರ್ಕಾರ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮೊಂಡುತನ ತೋರಿಸುತ್ತಿದೆ. ಧಾರವಾಡ ಅದೆಷ್ಟೋ ಉದ್ಯೋಗಾಕಾಂಕ್ಷಿಗಳಿಗೆ ನೆಲೆ ಕೊಟ್ಟಿದೆ. ಆದರೆ, ಅವರಿಗಿರುವ ಕಳವಳ ಏನೆಂದರೆ ಸರ್ಕಾರ ಅದ್ಯಾವಾಗ ಉದ್ಯೋಗಕ್ಕೆ ಅರ್ಜಿ ಕರೆಯುತ್ತದೆಯೋ […]

ಮತ್ತಷ್ಟು ಓದಿ..

ಶ್ರಮಿಕ ವಸತಿ ಸಹಿತ ಶಾಲೆಗಳ ಟೆಂಡರ್ ನಲ್ಲಿ ಅಕ್ರಮ ನಡೆದಿಲ್ಲ: ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್.

ಬೆಳಗಾವಿ ಸುವರ್ಣಸೌಧ,ಡಿ.08 (ಕರ್ನಾಟಕ ವಾರ್ತೆ): ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ರಾಜ್ಯದ 32 ಕಡೆಗಳಲ್ಲಿ ಸುಮಾರು 784 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶ್ರಮಿಕ ವಸತಿ ಸಹಿತ ಶಾಲೆಗಳ ಟೆಂಡರ್ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ತಿಳಿಸಿದ್ದಾರೆ. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಗೋವಿಂದ ರಾಜು ಅವರ ಗಮನ ಸೆಳೆಯುವ ಸೂಚನೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ […]

ಮತ್ತಷ್ಟು ಓದಿ..