ಶ್ರಮಿಕ ವಸತಿ ಸಹಿತ ಶಾಲೆಗಳ ಟೆಂಡರ್ ನಲ್ಲಿ ಅಕ್ರಮ ನಡೆದಿಲ್ಲ: ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್.

ಬೆಳಗಾವಿ ಸುವರ್ಣಸೌಧ,ಡಿ.08 (ಕರ್ನಾಟಕ ವಾರ್ತೆ): ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ರಾಜ್ಯದ 32 ಕಡೆಗಳಲ್ಲಿ ಸುಮಾರು 784 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶ್ರಮಿಕ ವಸತಿ ಸಹಿತ ಶಾಲೆಗಳ ಟೆಂಡರ್ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ತಿಳಿಸಿದ್ದಾರೆ. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಗೋವಿಂದ ರಾಜು ಅವರ ಗಮನ ಸೆಳೆಯುವ ಸೂಚನೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ […]

ಮತ್ತಷ್ಟು ಓದಿ..

ಗಡಿ ಭಾಗದ ಸಮಸ್ಯೆಗಳ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ ಭೇಟಿಗೆ ಕನ್ನಡ ಸಂಘಟನೆಗಳ ನಿರ್ಧಾರ

ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ಗಡಿ ಭಾಗದ ವಿವಿಧ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗಡಿ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ ಅವರೊಂದಿಗೆ ಚರ್ಚಿಸಲು ರವಿವಾರ ಸಂಜೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಸಭೆ ಸೇರಿದ್ದ ವಿವಿಧ ಕನ್ನಡಪರ ಸಂಘಟನೆಗಳು ತೀರ್ಮಾನ ಮಾಡಿದವು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರದ ಮತ್ತು ಗಡಿ ಸಂರಕ್ಷಣಾ ಆಯೋಗದ ಪ್ರಾದೇಶಿಕ ಕಚೇರಿ ಸ್ಥಾಪನೆ, ರಾಜ್ಯ ಸರಕಾರದ ಏಳು ಕೋಟಿ ರೂಪಾಯಿ […]

ಮತ್ತಷ್ಟು ಓದಿ..

ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ನಾಳೆಯಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿಗೆ ಆಗಮಿಸಿದರು. ಸುವರ್ಣ ಸೌಧದ ಹೆಲಿಪ್ಯಾಡ್ ಗೆ ಆಗಮಿಸಿದ ಸಿಎಂಗೆ ಸಚಿವರಾದ ಕೆ ಜೆ ಜಾರ್ಜ್, ಎಚ್ ಸಿ ಮಹಾದೇವಪ್ಪ ಹಾಗೂ ಕೃಷ್ಣ ಬೈರೇಗೌಡ ಸಾಥ್ ನೀಡಿದ್ದಾರೆ. ಬೆಳಗಾವಿಗೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಆಸೀಫ್ ಸೇಠ್, ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ, ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಸ್ವಾಗತಿಸಿದರು. ಬಳಿಕ ಸಿದ್ದರಾಮಯ್ಯ ಅವರು ಪೊಲೀಸ್ ಗೌರವ ವಂದನೆ ಸ್ವೀಕರಿಸಿ, ಪ್ರವಾಸಿ […]

ಮತ್ತಷ್ಟು ಓದಿ..

ಬೆಳಗಾವಿ ಅಧಿವೇಶನ ಪ್ರತಿಭಟನೆಯ ವೇದಿಕೆ, ಪಿಕ್‌ನಿಕ್ ಎಂಬ ಭಾವ ಸರಿಯಲ್ಲ: ಸಚಿವ ಎಚ್.ಕೆ.ಪಾಟೀಲ್

ಹುಬ್ಬಳ್ಳಿ: ಬೆಳಗಾವಿ ಅಧಿವೇಶನವು ಪ್ರತಿಭಟನೆಯ ವೇದಿಕೆ, ಪಿಕ್‌ನಿಕ್ ಎಂಬ ಭಾವದಿಂದ ನಡೆದುಕೊಳ್ಳುವುದು ಸರಿಯಲ್ಲ. ಅಧಿವೇಶನದ ಪಾವಿತ್ರ್ಯ ಮತ್ತು ಶಕ್ತಿಯನ್ನು ಕುಂದಿಸುವ ಕೆಲಸ ಆಗಬಾರದು ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ,  ಶಾಸಕರು ಮತ್ತು ವಿಪಕ್ಷಗಳಿಗೆ ಕರೆ ನೀಡಿದರು. ಭಾನುವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ಅಸಮಾನತೆ ದೂರಮಾಡಲು ಉತ್ತರ ಕರ್ನಾಟಕ ಮತ್ತು ಸಮಗ್ರ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚಿಸುವ ಜವಾಬ್ದಾರಿ ಶಾಸಕರ ಮೇಲಿದೆ ಎಂದರು. ಸಾಮಾಜಿಕ ಬಹಿಷ್ಕಾರ ನಿಷೇಧ, ಧಾರ್ಮಿಕ ಸಂಸ್ಥೆಗಳ ಪರಿಣಾಮಕಾರಿ ನಿರ್ವಹಣೆ, ಹಸ್ತಪ್ರತಿಗಳ […]

ಮತ್ತಷ್ಟು ಓದಿ..

ಪಂಚ ಗ್ಯಾರಂಟಿ ಕಾರ್ಯಗಾರ: ಫಲಾನುಭವಿಗಳ ಪ್ರಗತಿ ಸಮಾವೇಶ

ಬೆಳಗಾವಿ, ನ.30(ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರ ಬಡವರ ಪರವಾಗಿದ್ದು, ಸುಮಾರು 70 ವರ್ಷಗಳಿಂದ ಪ್ರತಿ ಸರ್ಕಾರದ ಅವಧಿಯಲ್ಲಿ ಭೂಮಿ ಮಂಜೂರು, ಶೈಕ್ಷಣಿಕ ಪ್ರಗತಿ, ಸಾರಿಗೆ ವ್ಯವಸ್ಥೆ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಸ್ತುತ ರಾಜ್ಯ ಸರ್ಕಾರದ ಅವಧಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ದೇಶಕ್ಕೆ ಮಾದರಿಯಾಗಿದೆ ಎಂದು ಲೋಕೋಪಯೋಗಿ ಹಾಗೂ ಸತೀಶ ಜಾರಕಿಹೊಳಿ ಅವರು ತಿಳಿಸಿದರು. ನಗರದ ಕುಮಾರ ಗಂದರ್ವ ರಂಗಂಮದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಇವರ ಸಹಯೋಹದಲ್ಲಿ ರವಿವಾರ (ನ.30) ಜರುಗಿದ […]

ಮತ್ತಷ್ಟು ಓದಿ..

ಹಾಸ್ಯ ನಟ ಉಮೇಶ್ ರವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಬೆಂಗಳೂರು, ನವೆಂಬರ್ 30 : ಸುಮಾರು 900 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಖ್ಯಾತ ಹಾಸ್ಯ ನಟರಾಗಿದ್ದ ಉಮೇಶ್ ರವರ ನಿಧನದಿಂದ ದು:ಖ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದರು. ಅವರು ಇಂದು ಚಲನಚಿತ್ರ ನಟ ಉಮೇಶ್ ರವರ ಪಾರ್ಥೀವ ಶರೀರವನ್ನು ದರ್ಶನ ಮಾಡಿ ಕುಟುಂಬಕ್ಕೆ ಸಾಂತ್ವನ ತಿಳಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್ ರವರು ನಿಧನರಾಗಿದ್ದಾರೆ. ಮೈಸೂರಿನವರಾದ ಉಮೇಶ್ ರವರು ತಮ್ಮ ಕಿರಿಯ ವಯಸ್ಸಿನಲ್ಲಿಯೇ ರಂಗಭೂಮಿಯ ನಟರಾಗಿ, ನಂತರ […]

ಮತ್ತಷ್ಟು ಓದಿ..

ಡಿ.1 ಉದ್ಯೋಗಾಂಕ್ಷಿಗಳ ಧಾರವಾಡ ಚಲೋ ಹೋರಾಟ: ಅನುಮತಿ ನಿರಾಕರಿಸಿದ ಪೊಲೀಸ್ ಇಲಾಖೆ

ಧಾರವಾಡ: ರಾಜ್ಯ ಸರ್ಕಾರ ಯಾವುದೇ ಸರ್ಕಾರಿ ಉದ್ಯೋಗಗಳ ನೇಮಕಾತಿ ಮಾಡಿಕೊಳ್ಳುತ್ತಿಲ್ಲ ಮತ್ತು ವಯೋಮಿತಿ ಸಡಿಲಿಕೆ ಕೂಡ ಮಾಡುತ್ತಿಲ್ಲ ಎಂದು ಸರ್ಕಾರದ ವಿರುದ್ದ ರೊಚ್ಚಿಗೆದ್ದಿರುವ ವಿದ್ಯಾರ್ಥಿ ಸಂಘಟನೆ ಮತ್ತು ಸಾವಿರಾರು ಉದ್ಯೋಗಾಕಾಂಕ್ಷಿಗಳು ನಾಳೆ ಡಿಸೆಂಬರ್ 1ನೇ ತಾರೀಖಿನಂದು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ಆಯೋಜನೆ ಮಾಡಲು ಮುಂದಾಗಿದ್ದು, ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ. ಡಿಸೆಂಬರ್ 1 ಕ್ಕೆ ಧಾರವಾಡ ಚಲೋ‌ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ಆಯೋಜನೆ ಮಾಡಿ ಈ ಕುರಿತು ಸಾಮಾಜಿಕ ಜಾಲ ತಾಣದಲ್ಲಿ ಕರೆ ನೀಡಲಾಗಿದೆ. ವಯೋಮಿತಿ ಸಡಿಲಿಕೆ, […]

ಮತ್ತಷ್ಟು ಓದಿ..

ವಿಶೇಷಚೇತನರಿಗೆ ಪ್ರತ್ಯೇಕ ನಿಗಮ/ಮಂಡಳಿ ರಚನೆಗೆ ಮುಖ್ಯಮಂತ್ರಿಗೆ ಸಚಿವ ಸಂತೋಷ್ ಲಾಡ್ ಪತ್ರ

ಬೆಂಗಳೂರು: ಸರ್ಕಾರದ ಸವಲತ್ತುಗಳನ್ನು ತ್ವರಿತವಾಗಿ ಮತ್ತು ನೇರವಾಗಿ ತಲುಪಿಸಲು ಸಾಧ್ಯವಾಗುವಂತೆ ವಿಶೇಷ ಚೇತನರಿಗಾಗಿಯೇ ಒಂದು ಪ್ರತ್ಯೇಕ ನಿಗಮ ಅಥವಾ ಮಂಡಳಿಯ ಸ್ಥಾಪನೆಯ ಅಗತ್ಯವಿದೆ ಎಂದು ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಪ್ರತಿಪಾದಿಸಿದ್ದಾರೆ. ಈ ವಿಷಯದ ಸಂಬಂಧ ಶುಕ್ರವಾರ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿರುವ ಸಚಿವರು, ಸದ್ಯ ವಿಶೇಷಚೇತನರ ಇಲಾಖೆಯು ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಹಾಗೂ ಹಿರಿಯ ನಾಗರಿಕರನ್ನು ಒಳಗೊಂಡ ಇಲಾಖೆಯಲ್ಲಿ ಇರುವುದರಿಂದ, ಈ ಇಲಾಖೆಯು ಬಹಳ […]

ಮತ್ತಷ್ಟು ಓದಿ..

ಸಿಎಂ ಖುರ್ಚಿ ಕದನ ಉಭಯ ನಾಯಕರ ಜಂಟಿ ಸುದ್ದಿಗೋಷ್ಠಿ: ರಾಜಕೀಯ ಮೇಲಾಟಕ್ಕೆ ತಾತ್ಕಾಲಿಕ ವಿರಾಮ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ ತೆರಳಿ ಬ್ರೇಕ್ ಫಾಸ್ಟ್ ಮೀಂಟಿಂಗ್ ನಲ್ಲಿ ಭಾಗವಹಿಸಿದರು. ಇದೇ ವೇಳೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿಸಿಎಂ ಅವರನ್ನು ಸಿಎಂ ಸಿದ್ದರಾಮಯ್ಯ ಬರಮಾಡಿಕೊಂಡರು. ಸಿಎಂ ನಿವಾಸದಲ್ಲೇ ಉಭಯ ನಾಯಕರು ಉಪಹಾರ ಮಾಡುತ್ತ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ಬ್ರೇಕ್ ಫಾಸ್ಟ್ ಮುಗಿಸಿ ಉಭಯ ನಾಯಕರು ನಗುನಗುತ್ತಲೇ ಹೊರಬಂದು ಜಂಟಿ ಸುದ್ದಿಗೋಷ್ಠಿ ನಡೆಸಿ ಪತ್ರಕರ್ತರೊಂದಿಗೆ ಮಾತನಾಡಿದರು. ನಾನು, ಡಿ.ಕೆ.ಶಿವಕುಮಾರ್ ಹಾಗೂ ಪೊನ್ನಣ್ಣ ಬ್ರೇಕ್ […]

ಮತ್ತಷ್ಟು ಓದಿ..

ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರ ಮಹಾತ್ವಾಕಾಂಕ್ಷೆಯ 3 ಯೋಜನೆಗಳು ಲೋಕಾರ್ಪಣೆ: ಸಿಎಂ, ಡಿಸಿಎಂ ರಿಂದ ಚಾಲನೆ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಕನಸಿನ ಯೋಜನೆಗಳಾದ ಅಕ್ಕ ಪಡೆ, ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಅದ್ದೂರಿ ಸಮಾರಂಭದಲ್ಲಿ ಚಾಲನೆ ನೀಡಿದರು. ಅರಮನೆ ಮೈದಾನದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ […]

ಮತ್ತಷ್ಟು ಓದಿ..