ಹಿಂಡಾಲ್ಕೋ ಕಂಪನಿಯಲ್ಲಿ ಕಾರ್ಮಿಕ ಆತ್ಮಹತ್ಯೆ; ಕಲ್ಲು ತೂರಾಟ, ಸ್ಥಳದಲ್ಲಿ ಬಿಗುವಿನ ವಾತಾವರಣ!
ಬೆಳಗಾವಿ: ಇಲ್ಲಿನ ಹೊರವಲಯದಲ್ಲಿರುವ ಪ್ರಸಿದ್ಧ ಹಿಂಡಾಲ್ಕೋ ಕಂಪನಿಯ ಆವರಣದಲ್ಲಿ ಯುವ ಕಾರ್ಮಿಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ನಡೆದಿದೆ. ಘಟನೆಯ ಬೆನ್ನಲ್ಲೇ ಆಕ್ರೋಶಗೊಂಡ ನೂರಾರು ಜನ ಕಂಪನಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಸದ್ಯ ಸ್ಥಳದಲ್ಲಿ ತೀವ್ರ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬೆಳಗಾವಿ ತಾಲೂಕಿನ ಮುತ್ತ್ಯಾನಟ್ಟಿ ಗ್ರಾಮದ ನಿವಾಸಿ ಶಂಕರ್ ತಳವಾರ (24) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ. ಈ ಘಟನೆ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ವಾಟ್ಸಾಪ್ ಸ್ಟೇಟಸ್ನಲ್ಲಿ ಡೆತ್ನೋಟ್! […]
ಮತ್ತಷ್ಟು ಓದಿ..
