ಹಿರಿಯ ನಾಗರಿಕರಿಗಾಗಿಯೇ ಜನ್ಮದಿನ ಸಮರ್ಪಣೆ: ಅಪರೂಪದ ಕಾರ್ಯಕ್ರಮ

ಮಾನವೀಯ ಮೌಲ್ಯಗಳಿಗೆ ಹೊಸ ಅರ್ಥ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಫೆಬ್ರವರಿ 14, ಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಜನ್ಮ ದಿನಾಚರಣೆ. ಹಿರಿಯ ನಾಗರಿಕರೊಂದಿಗೆ, ಅವರನ್ನು ಗೌರವಿಸುವ ಮೂಲಕ ಜನ್ಮ ದಿನಾಚರಣೆ ಮಾಡಲು ಲಕ್ಷ್ಮೀ ಹೆಬ್ಬಾಳಕರ್ ಅವರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಜನ್ಮದಿನವೆಂದರೆ ಕೇಕ್, ಹೂಗುಚ್ಛಗಳು, ಶುಭಾಶಯಗಳ ನಡುವೆ ನಡೆಯುವ ವೈಯಕ್ತಿಕ ಆಚರಣೆ. ಆದರೆ ಇದಕ್ಕೆ ವಿಭಿನ್ನ ಅರ್ಥ ನೀಡುವ ಮೂಲಕ ಮಾನವೀಯ ಮೌಲ್ಯಗಳಿಗೆ ಹೊಸ ಅರ್ಥ ಕೊಟ್ಟಿದ್ದಾರೆ ಸಚಿವೆ […]

ಮತ್ತಷ್ಟು ಓದಿ..

ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಕಾರ್ಯಕರ್ತರು

ಬೆಳಗಾವಿ: ಬೆಂಡಿಗೇರಿ ಗ್ರಾಮದ ಹಲವಾರು ಪ್ರಮುಖ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಗೃಹ ಕಚೇರಿಗೆ ಆಗಮಿಸಿದ ಕಾರ್ಯಕರ್ತರು, ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳು ಹಾಗೂ ಅಭಿವೃದ್ಧಿ ಪರ ಕೆಲಸಗಳನ್ನು ನೋಡಿ ಕಾಂಗ್ರೆಸ್ ಸೇರಲು ಬಯಸಿದ್ದಾಗಿ ತಿಳಿಸಿದರು. ಸಚಿವರು ಕಾಂಗ್ರೆಸ್ ಶಾಲು ಹಾಕಿ ಎಲ್ಲರನ್ನೂ ಪಕ್ಷಕ್ಕೆ ಸ್ವಾಗತಿಸಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು. ​

ಮತ್ತಷ್ಟು ಓದಿ..

ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ: ಪೂಜೆ ಸಲ್ಲಿಸಿದ ಮೃಣಾಲ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಸರಸ್ವತಿ ನಗರ, ಲಕ್ಷ್ಮೀ ಟೆಕಡಿ, ಫ್ರೀಡಂ ಫೈಟರ್ಸ್ ಕಾಲೋನಿ ಹಾಗೂ ಶಿವನೇರಿ ಕಾಲೋನಿಯ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೇರಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಆಸಕ್ತಿಯಿಂದ ಮಂಜೂರಾಗಿರುವ ಸುಮಾರು 1 ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು. ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಯಿತು. ಈ ವೇಳೆ ಮೋಹನ್ […]

ಮತ್ತಷ್ಟು ಓದಿ..

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಕ್ಕಿನಕೇರಿ ಗ್ರಾಮದಲ್ಲಿ ಸುಮಾರು 2 ಕೋಟಿ 60 ಲಕ್ಷ ರೂ. ವೆಚ್ಚದಲ್ಲಿ ಕೈಗೊಳ್ಳಲಿರುವ ರಸ್ತೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷ ಯುವರಾಜ ಕದಂ, ಗ್ರಾಮದ ಹಿರಿಯ ನಾಗರಿಕರು, ಸ್ಥಳೀಯ ಜನಪ್ರತಿನಿಧಿಗಳು, ನಿವಾಸಿಗಳು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

ಮತ್ತಷ್ಟು ಓದಿ..

2028ರಲ್ಲಿ ಪುನಃ ಕಾಂಗ್ರೆಸ್ ಅಧಿಕಾರಕ್ಕೆ ತರುವುದೇ ನಮಗೆ ಮುಖ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಸದ್ಯದ ರಾಜಕೀಯ ಬೆಳವಣಿಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಅದೇನಿದ್ದರೂ ಹೈಕಮಾಂಡ್‌ ಗೆ ಬಿಟ್ಟ ವಿಚಾರ. 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವುದೇ ನಮಗೆಲ್ಲರಿಗೂ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕ‌ರ್ ಹೇಳಿದರು. ನವೆಂಬರ್ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸಿದ ಬಳಿಕ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾನು ಕಾರ್ಯಕ್ರಮದ ಸಿದ್ಧತೆಯಲ್ಲಿ […]

ಮತ್ತಷ್ಟು ಓದಿ..

ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ, ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು: ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್ 25: ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೂಲತ: ಮೈಸೂರು ಜಿಲ್ಲೆಯವರಾದ ಕುಮಾರ ಎಂಬುವರು ಅಮೆರಿಕಾದಲ್ಲಿ ನೆಲೆಸಿದ್ದು, ಇದರ ಏಜೆನ್ಸಿ ಪಡೆದಿದ್ದಾರೆ.‌ ಕೆಎಂಎಫ್ ಹಾಗೂ ಕುಮಾರ ಅವರಿಗೆ ಶುಭವಾಗಲಿ ಎಂದು ಹಾರೈಸಿದರು. ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕುಶಾಸಕರ ಮತ್ತೊಂದು ತಂಡ ದೆಹಲಿಗೆ ಭೇಟಿ ನೀಡಿರುವ […]

ಮತ್ತಷ್ಟು ಓದಿ..

ಹೊಸ ಇತಿಹಾಸ ಸೃಷ್ಟಿಸಲಿದೆ ನವೆಂಬರ್ 28ರ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ರಾಮನಗರ : ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು‌ 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮುಖ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುವುದು. ಇದೊಂದು ಹೊಸ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ರಾಮನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಬೆಂಗಳೂರು ದಕ್ಷಿಣ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಸಚಿವರು ಮಾತನಾಡಿದರು. ‌ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ […]

ಮತ್ತಷ್ಟು ಓದಿ..