ಕರ್ನಾಟಕದಾದ್ಯಂತ ನೀಟ್ ಮರು ಪರೀಕ್ಷೆ; ಬೆಳಗಾವಿಯ ಪರೀಕ್ಷಾ ಕೇಂದ್ರಗಳಿಗೆ ಡಿಸಿ, ಕಮೀಷನರ್ ದಿಢೀರ್ ಭೇಟಿ, ಪರಿಶೀಲನೆ
ಬೆಳಗಾವಿ: ದೇಶಾದ್ಯಂತ ಇಂದು ಬಹುನಿರೀಕ್ಷಿತ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಮರು ಪರೀಕ್ಷೆ ನಡೆಯುತ್ತಿದ್ದು, ಕರ್ನಾಟಕದಲ್ಲೂ ಕಟ್ಟುನಿಟ್ಟಿನ ಭದ್ರತೆ ಮತ್ತು ವ್ಯವಸ್ಥೆಗಳ ನಡುವೆ ಪರೀಕ್ಷೆ ಆರಂಭವಾಗಿದೆ. ರಾಜ್ಯಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಇಂದು ವೈದ್ಯಕೀಯ ಸೀಟಿಗಾಗಿ ಭವಿಷ್ಯದ ಪರೀಕ್ಷೆ ಬರೆಯುತ್ತಿದ್ದಾರೆ. ಕರ್ನಾಟಕದಲ್ಲಿ ನೀಟ್ ಪರೀಕ್ಷೆಯ ಅಂಕಿ-ಅಂಶಗಳು ಕರ್ನಾಟಕದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಇರುವ ಕ್ರೇಜ್ ಈ ಬಾರಿಯೂ ಮುಂದುವರಿದಿದೆ. ರಾಜ್ಯದ ಪ್ರಮುಖ ನಗರಗಳಾದ ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು ಮತ್ತು ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ […]
ಮತ್ತಷ್ಟು ಓದಿ..
