‘ಸಿದ್ದರಾಮಯ್ಯ ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿಲ್ಲ’; ಸಚಿವ ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸದಿರಬಹುದು ಎಂದು ಹೇಳಿರುವುದನ್ನು ಚುನಾವಣಾ ರಾಜಕಾರಣದಿಂದ ನಿವೃತ್ತಿ ಎಂದು ಅರ್ಥೈಸಬಾರದು ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಚುನಾವಣೆಗೆ ಸ್ಪರ್ಧಿಸದಿರಬಹುದು ಎಂದು ಹೇಳಿದ್ದಾರೆಯೇ ಹೊರತು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುವುದಾಗಿ ಹೇಳಿಲ್ಲ ಎಂದು ತಿಳಿಸಿದರು. ಸಿದ್ದರಾಮಯ್ಯ ಅವರು ತಾವು ಮುಂದಿನ ಚುನಾವಣೆಗೆ ರಾಜಕೀಯ ನಿವೃತ್ತಿ ಪಡೆಯಬಹುದು ಎಂದು ಹೇಳಿದ್ದರೂ, ಸಮಾಜದಲ್ಲಿರುವ ದುರ್ಬಲರು ಹಾಗೂ ಶೋಷಿತರ ಪರವಾಗಿ ಧ್ವನಿ ಎತ್ತುವ […]

ಮತ್ತಷ್ಟು ಓದಿ..

ಮುಖ್ಯ ರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕಿಲ್ಲ ಅವಕಾಶ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಎಚ್ಚರಿಕೆ: ಸಿಎಂ ಡಿ.ಕೆ.ಶಿವಕುಮಾರ್

ಬೆಳಗಾವಿ: ರಾಜಧಾನಿ ಬೆಂಗಳೂರಿನ ಸಾರ್ವಜನಿಕರ ಸುಗಮ ಸಂಚಾರ ಹಾಗೂ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮುಖ್ಯ ರಸ್ತೆಗಳಲ್ಲಿ ಯಾವುದೇ ಕಾರಣಕ್ಕೂ ಬೀದಿ ಬದಿಯ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಸ್ತೆಬದಿ ವ್ಯಾಪಾರಿಗಳ ಪುನರ್ವಸತಿ ಮತ್ತು ನಗರದ ಸೌಂದರ್ಯೀಕರಣದ ಕುರಿತು ಸರ್ಕಾರದ ನಿಲುವನ್ನು ಕಡಕ್ ಆಗಿ ತಿಳಿಸಿದರು. ಸರ್ವಪಕ್ಷ ಶಾಸಕರ ಒಮ್ಮತದ ಅಭಿಪ್ರಾಯ: ತಾವು ಈ ಹಿಂದೆ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ಅವಧಿಯನ್ನು […]

ಮತ್ತಷ್ಟು ಓದಿ..

ಖಾಸಗಿ ಹೋಟೆಲ್‌ನಲ್ಲಿ ಶಾಸಕರಿಗೆ ಸಿಎಂ ಡಿಕೆಶಿ ಔತಣಕೂಟ: ಸ್ಥಳೀಯ ನಾಯಕರ ವಿಶ್ವಾಸಗಳಿಸಲು ಮುಂದಾದ ಮುಖ್ಯಮಂತ್ರಿ.

ಬೆಳಗಾವಿ: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಕುಂದಾನಗರಿ ಬೆಳಗಾವಿಗೆ ಆಗಮಿಸಿರುವ ಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ನಗರದ ಪ್ರತಿಷ್ಠಿತ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿಗಳು ಕಾಂಗ್ರೆಸ್ ಶಾಸಕರು ಹಾಗೂ ಪ್ರಮುಖ ನಾಯಕರಿಗಾಗಿ ವಿಶೇಷ ‘ಡಿನ್ನರ್ ಮೀಟಿಂಗ್’ (ಔತಣಕೂಟ) ಆಯೋಜಿಸಿದ್ದರು. ಉಸ್ತುವಾರಿ ಸಚಿವರು ಸೇರಿ ಪ್ರಮುಖ ನಾಯಕರ ಭಾಗಿ ಈ ಹೈಪ್ರೊಫೈಲ್ ಡಿನ್ನರ್ ಮೀಟಿಂಗ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಜಿಲ್ಲೆಯ […]

ಮತ್ತಷ್ಟು ಓದಿ..

ಬೆಳಗಾವಿ ಸುವರ್ಣ ಸೌಧದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಸುದ್ಧಿಗೋಷ್ಠಿ: ಕೃಷಿ, ನೀರಾವರಿ ಹಾಗೂ ಆಡಳಿತ ಸುಧಾರಣೆಗೆ ದಿಕ್ಸೂಚಿ

ಬೆಳಗಾವಿ: ಕಿತ್ತೂರು ಕರ್ನಾಟಕ ಭಾಗದ ಅಭಿವೃದ್ಧಿ, ಜಲಸಂಪನ್ಮೂಲ ನಿರ್ವಹಣೆ ಹಾಗೂ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸುವರ್ಣ ಸೌಧದಲ್ಲಿ ವಿಭಾಗ ಮಟ್ಟದ ಶಾಸಕರು ಮತ್ತು ಅಧಿಕಾರಿಗಳ ಮಹತ್ವದ ಸಭೆ ನಡೆಸಿ, ಬಳಿಕ ಸುದ್ಧಿಗೋಷ್ಠಿಯಲ್ಲಿ ಸರ್ಕಾರದ ಹಲವು ಐತಿಹಾಸಿಕ ತೀರ್ಮಾನಗಳನ್ನು ಪ್ರಕಟಿಸಿದರು.ರಾಜ್ಯದ ಹಿತದೃಷ್ಟಿಯಿಂದ ಪಕ್ಷಾತೀತವಾಗಿ ಎಲ್ಲ ಶಾಸಕರನ್ನು ಈ ಸಭೆಗೆ ಆಹ್ವಾನಿಸಲಾಗಿತ್ತು ಎಂದು ತಿಳಿಸಿದ ಸಿಎಂ, ಪ್ರಸ್ತುತ ಎದುರಾಗಿರುವ ನೀರಿನ ಬಿಕ್ಕಟ್ಟು ಮತ್ತು ಕೃಷಿ ಸವಾಲುಗಳನ್ನು ಎದುರಿಸಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದರು. […]

ಮತ್ತಷ್ಟು ಓದಿ..

ಬರಗಾಲದ ಭೀತಿ ದೂರ, ರಾಜ್ಯಾದ್ಯಂತ ಹರ್ಷ: ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಆಶಾವಾದ

ಬೆಳಗಾವಿ: “ರಾಜ್ಯದಲ್ಲಿ ಭೀಕರ ಬರಗಾಲ ಆವರಿಸುವ ಹಾಗೂ ಕುಡಿಯುವ ನೀರಿಗೆ ತೀವ್ರ ತತ್ವಾರ ಉಂಟಾಗುವ ಭೀತಿ ಎದುರಾಗಿತ್ತು. ಆದರೆ ಕಳೆದ ಎರಡೂಮೂರು ದಿನಗಳಿಂದ ಮಳೆ ತನ್ನ ದಿಕ್ಕನ್ನು ಬದಲಾಯಿಸಿದ್ದು, ಕರ್ನಾಟಕದಲ್ಲಿ ಸದ್ಯ ಸಂತೋಷದ ವಾತಾವರಣ ನಿರ್ಮಾಣವಾಗಿದೆ” ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಳೆ ಪರಿಸ್ಥಿತಿ, ಜಲಾಶಯಗಳ ಸ್ಥಿತಿಗತಿ, ಮೋಡ ಬಿತ್ತನೆ ಹಾಗೂ ಆರ್‌ಎಸ್‌ಎಸ್ ಬೈಠಕ್ ಸೇರಿದಂತೆ ಹಲವು ಪ್ರಮುಖ ವಿದ್ಯಮಾನಗಳ ಕುರಿತು  ಮಾಹಿತಿ […]

ಮತ್ತಷ್ಟು ಓದಿ..

ಜಿಲ್ಲಾ ಪ್ರಕೃತಿ ನಿರ್ವಹಣಾ ಮೇಲುಸ್ತುವಾರಿ ಸಭೆ

ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಿ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ, ಜುಲೈ.04 (ಕರ್ನಾಟಕ ವಾರ್ತೆ): ಮಳೆಯ ಕೊರತೆಯಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಸಮಸ್ಯೆ ಬಾರದಂತೆ ಕ್ರಮ ವಹಿಸಲು ಮೀಸಲು ಅನುದಾನವನ್ನು ಬಳಕೆ ಮಾಡಿಕೊಳ್ಳಬೇಕು. ಅಗತ್ಯವಿದ್ದಲ್ಲಿ ಖಾಸಗಿ ಕೊಳವೆಬಾವಿ ಹಾಗೂ ಟ್ಯಾಂಕರ್ ಮೂಲಕ ಮೂಲಕ ನೀರು ಪೂರೈಕೆಗೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಪ್ರಕೃತಿ ನಿರ್ವಹಣಾ ಮೇಲುಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಜು.04) ನಡೆದ ಜಿಲ್ಲಾ ಪ್ರಕೃತಿ […]

ಮತ್ತಷ್ಟು ಓದಿ..

ಯಮಕನಮರಡಿ ಪ್ರಕರಣಕ್ಕೆ ರಾಜಕೀಯ ಬಣ್ಣ: “ಆರೋಪ ಮಾಡುವವರು ಖಾಲಿ ಇದ್ದಾರೆ” ಬಿಜೆಪಿಗೆ ಟಾಂಗ್ ಕೊಟ್ಟ ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಯಮಕನಮರಡಿಯಲ್ಲಿ ಸ್ವಾಮೀಜಿಯವರ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಡುತ್ತಿರುವ ಆರೋಪಗಳಿಗೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಚುನಾವಣೆ ಹತ್ತಿರ ಬರುತ್ತಿದ್ದಂತೆ ಈಗ ಇದೊಂದು ಹೊಸ ರಾಜಕೀಯ ಆರಂಭವಾಗಿದೆ. ಎಮ್ಮಿ, ನಾಯಿ ಸತ್ತರೂ ನಮ್ಮ ಮೇಲೆಯೇ ಆರೋಪ ಹೊರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಲೇವಡಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣವನ್ನು ಮುಂದಿಟ್ಟುಕೊಂಡು ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಬಿಂಬಿಸುತ್ತಿರುವ […]

ಮತ್ತಷ್ಟು ಓದಿ..

ವಿಧಾನಸೌಧದಲ್ಲಿ ನಗರಾಭಿವೃದ್ಧಿ ಸಚಿವರ ಸಚಿವಾಲಯದ ಕಚೇರಿ ಉದ್ಘಾಟನೆ

ಬೆಂಗಳೂರು, ಜು. 2: ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿನ ಸಚಿವಾಲಯದ ತಮ್ಮ ನೂತನ ಕಚೇರಿಯನ್ನು ಉದ್ಘಾಟಿಸಿದರು. ಬಳಿಕ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಅಹವಾಲುಗಳು ಹಾಗೂ ಮನವಿಗಳನ್ನು ಆಲಿಸಿದ ಸಚಿವರು, ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಜನಪರ, ಪಾರದರ್ಶಕ ಹಾಗೂ ಉತ್ತರದಾಯಿ ಆಡಳಿತಕ್ಕೆ ಬದ್ಧತೆಯೊಂದಿಗೆ ಕಾರ್ಯನಿರ್ವಹಿಸುವ ಸಂಕಲ್ಪವನ್ನು ಪುನರುಚ್ಚರಿಸಿದರು. ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ವಿಷಯಗಳಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ […]

ಮತ್ತಷ್ಟು ಓದಿ..

ಭರಮ್ಯಾನಟ್ಟಿ ಗ್ರಾಮದಲ್ಲಿ ಕುಕೃತ್ಯ ಎಸಗಿದ್ದ ಮೂವರು ಕಂಬಿ ಹಿಂದೆ: ಮಾರಿಹಾಳ ಪೊಲೀಸರ ಭರ್ಜರಿ ಆಕ್ಷನ್

ಬೆಳಗಾವಿ: ವಿವಾಹಿತ ಮಹಿಳೆಯನ್ನು ಕರೆದೊಯ್ದ ಯುವಕನ ಮನೆ ಮೇಲೆ ದಾಳಿ ನಡೆಸಿ, ಧ್ವಂಸಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಬೆಳಗಾವಿಯ ಮಾರಿಹಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಂಧಿತರನ್ನು ನಾಗರಾಜ್ ನಾಯಕ, ರವಿ ಬೀಜಗತ್ತಿ ಹಾಗೂ ಈಶ್ವರ ಮುಚ್ಚಂಡಿ ಎಂದು ಗುರುತಿಸಲಾಗಿದೆ. ಬಂಧಿತ ಮೂವರೂ ಆರೋಪಿಗಳು ವಿವಾಹಿತ ಮಹಿಳೆ ನಾಗವ್ವ ಹಾಗೂ ಆಕೆಯ ಪತಿ ಬಸಪ್ಪನ ಸಂಬಂಧಿಕರು ಎಂದು ತಿಳಿದುಬಂದಿದೆ. ಘಟನೆಯ ಹಿನ್ನೆಲೆ: ಗ್ರಾಮದ ವಿವಾಹಿತೆ ನಾಗವ್ವ ಎಂಬಾಕೆಯನ್ನು […]

ಮತ್ತಷ್ಟು ಓದಿ..

ಸ್ನೇಹಿತನ ಪತ್ನಿ ಜೊತೆ ಯುವಕ ಎಸ್ಕೇಪ್: ಕತ್ತಿ, ತಲವಾರಿನೊಂದಿಗೆ ನುಗ್ಗಿ ಇಡೀ ಮನೆಯನ್ನೇ ಧ್ವಂಸಗೊಳಿಸಿದ ಉದ್ರಿಕ್ತರು!

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಹಾಗೂ ಕಾನೂನು ಕೈಗೆತ್ತಿಕೊಂಡ ಘಟನೆ ನಡೆದಿದೆ. ವಿವಾಹಿತ ಮಹಿಳೆಯೊಬ್ಬಳನ್ನು ಕರೆದೊಯ್ದ ಯುವಕನ ಮನೆ ಮೇಲೆ ಎರಡು ನೂರಕ್ಕೂ ಹೆಚ್ಚು ಜನರ ಗುಂಪು ಮಾರಕಾಸ್ತ್ರಗಳೊಂದಿಗೆ ದಾಳಿ ನಡೆಸಿ, ಇಡೀ ಮನೆಯನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿರುವ ಘಟನೆ ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ವರದಿಯಾಗಿದೆ. ಈ ಗ್ರಾಮವು ಸಚಿವ ಸತೀಶ್ ಜಾರಕಿಹೊಳಿ ಅವರು ಪ್ರತಿನಿಧಿಸುವ ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡಲಿದ್ದು, ಸದ್ಯ ಇಡೀ ಭಾಗದಲ್ಲಿ ತೀವ್ರ ಆತಂಕ ಹಾಗೂ ಉದ್ವಿಗ್ನ ವಾತಾವರಣ ಸೃಷ್ಟಿಸಿದೆ. […]

ಮತ್ತಷ್ಟು ಓದಿ..