‘ಸಿದ್ದರಾಮಯ್ಯ ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿಲ್ಲ’; ಸಚಿವ ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸದಿರಬಹುದು ಎಂದು ಹೇಳಿರುವುದನ್ನು ಚುನಾವಣಾ ರಾಜಕಾರಣದಿಂದ ನಿವೃತ್ತಿ ಎಂದು ಅರ್ಥೈಸಬಾರದು ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಚುನಾವಣೆಗೆ ಸ್ಪರ್ಧಿಸದಿರಬಹುದು ಎಂದು ಹೇಳಿದ್ದಾರೆಯೇ ಹೊರತು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುವುದಾಗಿ ಹೇಳಿಲ್ಲ ಎಂದು ತಿಳಿಸಿದರು. ಸಿದ್ದರಾಮಯ್ಯ ಅವರು ತಾವು ಮುಂದಿನ ಚುನಾವಣೆಗೆ ರಾಜಕೀಯ ನಿವೃತ್ತಿ ಪಡೆಯಬಹುದು ಎಂದು ಹೇಳಿದ್ದರೂ, ಸಮಾಜದಲ್ಲಿರುವ ದುರ್ಬಲರು ಹಾಗೂ ಶೋಷಿತರ ಪರವಾಗಿ ಧ್ವನಿ ಎತ್ತುವ […]

ಮತ್ತಷ್ಟು ಓದಿ..

ನಗರ ಸ್ಥಳೀಯ ಸಂಸ್ಥೆಗಳಿಗೆ 15ನೇ ಹಣಕಾಸು ಆಯೋಗದ ₹887 ಕೋಟಿ ಅನುದಾನ ಬಿಡುಗಡೆಗೆ ಕೇಂದ್ರ ಸಚಿವರಿಗೆ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮನವಿ

ಬೆಂಗಳೂರು: ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಗುರುವಾರ ಬೆಂಗಳೂರಿಗೆ ಆಗಮಿಸಿರುವ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವ ತೋಖನ್ ಸಾಹು ಅವರನ್ನು ಕುಮಾರಕೃಪ ಅತಿಥಿಗೃದಲ್ಲಿ ಭೇಟಿ ಮಾಡಿ, ಕರ್ನಾಟಕದ ಅರ್ಹ ನಗರಾಭಿವೃದ್ಧಿ ಸಂಸ್ಥೆಗಳಿಗೆ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೊರತುಪಡಿಸಿ) 2025-26ನೇ ಹಣಕಾಸು ವರ್ಷಕ್ಕೆ 15ನೇ ಹಣಕಾಸು ಆಯೋಗವು ಶಿಫಾರಸು ಮಾಡಿರುವ ₹887 ಕೋಟಿ ಅನುದಾನವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. 15ನೇ ಹಣಕಾಸು ಆಯೋಗದ ನಿಯಮಾವಳಿಗಳ ಪ್ರಕಾರ […]

ಮತ್ತಷ್ಟು ಓದಿ..

ವಿಧಾನಸೌಧದಲ್ಲಿ ನಗರಾಭಿವೃದ್ಧಿ ಸಚಿವರ ಸಚಿವಾಲಯದ ಕಚೇರಿ ಉದ್ಘಾಟನೆ

ಬೆಂಗಳೂರು, ಜು. 2: ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿನ ಸಚಿವಾಲಯದ ತಮ್ಮ ನೂತನ ಕಚೇರಿಯನ್ನು ಉದ್ಘಾಟಿಸಿದರು. ಬಳಿಕ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಅಹವಾಲುಗಳು ಹಾಗೂ ಮನವಿಗಳನ್ನು ಆಲಿಸಿದ ಸಚಿವರು, ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಜನಪರ, ಪಾರದರ್ಶಕ ಹಾಗೂ ಉತ್ತರದಾಯಿ ಆಡಳಿತಕ್ಕೆ ಬದ್ಧತೆಯೊಂದಿಗೆ ಕಾರ್ಯನಿರ್ವಹಿಸುವ ಸಂಕಲ್ಪವನ್ನು ಪುನರುಚ್ಚರಿಸಿದರು. ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ವಿಷಯಗಳಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ […]

ಮತ್ತಷ್ಟು ಓದಿ..